ಪ್ರಮುಖ ವರದಿಗಳು

ಕಾಶ್ಮಿರದ ಪುಲ್ವಾಮದಲ್ಲಿ ಬೆಳ್ಳಂ ಬೆಳಗ್ಗೆ ಉಗ್ರರಿಂದ ಗುಂಡಿನ ದಾಳಿ :ಭಾರತೀಯ ಸೇನೆಯಿಂದ ಪ್ರತಿದಾಳಿ

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಶ್ರೀನಗರ/ಪುಲ್ವಾಮಾ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮಿರದ ಪುಲ್ವಾಮದಲ್ಲಿ ಮಂಗಳವಾರ ಬೆಳ್ಳಂ ಬೆಳಗ್ಗೆ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿರುವ ಬಗ್ಗೆ ವರದಿಯಾಗಿದೆ.

ಪುಲ್ವಾಮದ ಮಾರ್ವಲಾ ಪ್ರಾಂತ್ಯದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯ ನಡೆಸುವ ವೇಳೆ, ಉಗ್ರರು ಯೋಧರ ಮೇಲೆ ಮೊದಲು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.ಈ ವೇಳೆ ಭಾರತೀಯ ಸೇನೆಯು ಪ್ರತಿದಾಳಿ ನಡೆಸಿದ್ದು, ಗುಂಡಿನ ದಾಳಿ ಮುಂದುವರಿದಿದೆ ಎಂದು ವರದಿಯಾಗಿದೆ.

ಪುಲ್ವಾಮಾ ಜಿಲ್ಲೆಯ ಮರ್ವಾಲ್ ಪ್ರದೇಶದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕುವ ಕಾರ್ಯಾಚರಣೆ ಭಾರತೀಯ ಸೇನೆಯಿಂದ ನಡೆಯುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದು, ಘಟನೆಯ ಬಗ್ಗೆ ಇನ್ನೂ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಹೂತಿಟ್ಟಿದ್ದ ಸ್ಫೋಟಕವನ್ನು ಭದ್ರತಾ ಪಡೆಗಳು ಸೋಮವಾರ ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಎಲ್ಲಾ ಘಟನೆಗಳ ಬಗ್ಗೆ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿವೆ.

Comments are closed.