
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ವಿಶ್ವದ ಬಹುತೇಕ ದೇಶದ ನಾಯಕರು ಮೋದಿ ಶುಭಾಶಯಗಳನ್ನು ಕೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೇಪಾಳ, ರಷ್ಯಾ ಅಧ್ಯಕ್ಷರು ಸೇರಿದಂತೆ ಬಹುತೇಕ ದೇಶದ ನಾಯಕರು ಶುಭಾಶಯಗಳನ್ನು ಕೋರುತ್ತಿದ್ದಾರೆ
ಈ ಪೈಕಿ ಪ್ರಧಾನಿ ಮೋದಿಯವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಭಾಶಯ ಕೋರಿ ಪತ್ರವೊಂದನ್ನು ಬರೆದಿದ್ದಾರೆ.
ಪ್ರಧಾನಮಂತ್ರಿಯಾಗಿ ನೀವು ಮಾಡಿದ ಸಾಧನೆಯೂ ಅಂತಾರಾಷ್ಟ್ರೀಯ ಮಟ್ಟದ ಗೌರವಕ್ಕೆ ಅರ್ಹ. ನಿಮ್ಮ ನಾಯಕತ್ವದಲ್ಲಿ ಭಾರತ ಆರ್ಥಿಕ, ಸಾಮಾಜಿಕ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದೆ. ಭಾರತ ರಷ್ಯಾ ನಡುವಿನ ಶತಮಾನಗಳಷ್ಟು ಹಳೆಯದಾದ ಬಾಂಧವ್ಯವನ್ನು ಇನ್ನಷ್ಟು ವೃದ್ಧಿಗೊಳಿಸಲು ಶ್ರಮಿಸಿದ ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಸಾಲದು.
ಅಭಿವೃದ್ಧಿ ಹಾಗೂ ಶಾಂತಿ ಸ್ಥಾಪನೆಗಾಗಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ” ವ್ಲಾಡಿಮಿರ್ ಪುಟಿನ್ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಆರೋಗ್ಯವಂತರಾಗಿ, ಸಂತೋಷದಿಂದ ದೀರ್ಘಕಾಲ ಬಾಳಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಇದರಂತೆ ನೇಪಾಳದ ಪ್ರಧಾನಮಂತ್ರಿ ಕೆ.ಪಿ.ಶರ್ಮಾ ಒಲಿಯವರು ಶುಭಾಶಯ ಕೋರಿದ್ದು, ಜನ್ಮದಿನದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರಿಗೆ ಆತ್ಮೀಯ ಶುಭಾಶಯಗಳು. ನಾನು ನಿಮ್ಮ ಸಂತೋಷ ಹಾಗೂ ಉತ್ತಮ ಆರೋಗ್ಯವನ್ನು ಬಯಸುತ್ತೇನೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕೆಲಸವನ್ನು ಮುಂದುವರಿಸುಸೋಣ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮೂರು ದಶಕಗಳ ನಂತರ ಭಾರತದಲ್ಲಿ ಬಹುಮತ ಪಡೆದು ಸರ್ಕಾರ ರಚನೆ ಮಾಡಿರುವ ಹಾಗೂ ಸತತ ಎರಡು ಬಾರಿ ಪ್ರಧಾನಿ ಹುದ್ದೆಗೆ ಏರಿರುವ ಮೊದಲ ಕಾಂಗ್ರೆಸೇತರ ವ್ಯಕ್ತಿ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
Comments are closed.