ಕರಾವಳಿ

ಡ್ರಗ್ಸ್ ಸಾಗಾಟ ಆರೋಪ : ಖ್ಯಾತ ಡ್ಯಾನ್ಸರ್ ಕಿಶೋರ್‌ ಶೆಟ್ಟಿ ಮಂಗಳೂರು ಪೊಲೀಸ್ ವಶ!

Pinterest LinkedIn Tumblr

ಮಂಗಳೂರು, ಸೆಪ್ಟಂಬರ್. 19 : ಡ್ರಗ್ಸ್ ಸಾಗಿಸುತ್ತಿದ್ದ ಆರೋಪದಲ್ಲಿ ಖ್ಯಾತ ಡ್ಯಾನ್ಸರ್ ಕಿಶೋರ್‌ ಶೆಟ್ಟಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಶನಿವಾರ ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಈತ ಖ್ಯಾತ ಡ್ಯಾನ್ಸರ್ ಆಗಿದ್ದು, ಡ್ಯಾನ್ಸ್‌ ಇಂಡಿಯಾ ಡ್ಯಾನ್ಸ್‌‌‌ನಲ್ಲೂ ಸ್ಪರ್ಧಿಯಾಗಿ ಪಾಲ್ಗೊಂಡಿದ್ದ. ಮಾತ್ರವಲ್ಲದೇ, ABCD ಹಿಂದಿ ಚಲನಚಿತ್ರದಲ್ಲಿ ನಟಿಸಿದ್ದನು. ಇದೀಗ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರಿಂದ ಈತನನ್ನು ಬಂಧಿಸಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಮಾದಕವಸ್ತುಗಳ ಮಾರಾಟ ಜಾಲವನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಕೈಗೊಂಡಿದ್ದು, ಸ್ಯಾಂಡಲ್‌ವುಡ್‌‌ನಲ್ಲಿ ಡ್ರಗ್‌ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಂದಿಯನ್ನು ಬಂಧಿಸಿರುವ ಬಗ್ಗೆ ತಿಳಿದು ಬಂದಿದೆ. ಇದೇ ವೇಳೆ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದಲ್ಲಿ ಕಿಶೋರ್‌ ಶೆಟ್ಟಿಯನ್ನು ಮಂಗಳೂರು ಪೊಲೀಸರು ಬಂದಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಇಂದು ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅವರು ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸುವ ಸಾದ್ಯತೆ ಇದೆ ಎನ್ನಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಕಮಿಷನರ್ ಈ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Comments are closed.