ಕರಾವಳಿ

ಮಂಗಳೂರಿನಲ್ಲೂ ಡ್ರಗ್ಸ್ ನಂಟು : ಎಂಡಿಎಂಎ ಪೌಡರ್‌ ಸಹಿತಾ ಡ್ಯಾನ್ಸರ್‌‌ ಕಿಶೋರ್‌ ಶೆಟ್ಟಿ ಹಾಗೂ ಅಕೀಲ್ ನೌಶೀಲ್ ಬಂಧನ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್. 19 : ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೋಲಿಸರು ಹಾಗೂ ಇಕಾನಾಮಿಕ್ &ನಾರ್ಕೋಟಿಕ್ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸೊತ್ತು ಸಮೇತಾ ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರು ತಿಳಿಸಿದ್ದಾರೆ.

ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಖ್ಯಾತ ಡ್ಯಾನ್ಸರ್, ಕೋರಿಯೋಗ್ರಾಫರ್ ಕುಳಾಯಿ ನಿವಾಸಿ ಕಿಶೋರ್ ಅಮನ್ ಶೆಟ್ಟಿ(30) ಹಾಗೂ ಸುರತ್ಕಲ್ ಕಾನ ನಿವಾಸಿ ಅಕೀಲ್ ನೌಶೀಲ್ (28) ಎಂಬವರನ್ನು ಇಂದು ಬೆಳಗ್ಗೆ ನಗರದ ಕದ್ರಿ ಪದವು ಪರಿಸರದಲ್ಲಿ ಬಂಧಿಸಲಾಗಿದೆ.

ಆರೋಪಿಗಳಿಂದ ಮಾದಕ ವಸ್ತು ಎಂಡಿಎಂಎ ಪೌಡರ್‌‌, 1 ಬೈಕ್, 2 ಮೊಬೈಲ್ ಫೋನ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಳ್ಳಲಾಗಿದೆ ಎಂದು ತಿಳಿಸಿದರು.

ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಡ್ಯಾನ್ಸ್ ಕ್ಲಾಸ್ ತೆರೆದು ಅದರಲ್ಲಿ ಕೋರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ. ಇನ್ನೊರ್ವ ಆರೋಪಿ ಅಕೀಲ್ ನೌಶೀಲ್ ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಆಫೀಸರ್ ಆಗಿದ್ದು, ಒಂದು ವರ್ಷದ ಹಿಂದೆ ಊರಿಗೆ ವಾಪಾಸ್ಸಾಗಿದ್ದ. ಕಿಶೋರ್ ಶೆಟ್ಟಿ ಅಕೀಲ್‌ ನೌಶೀಲ್‌‌ ಜೊತೆ ಸೇರಿ ಮಾದಕ ವಸ್ತು ಖರೀದಿಸಿ ಮಾರಾಟ ಮಾಡುತ್ತಿದ್ದ ಎಂದು ಕಮಿಷನರ್ ತಿಳಿಸಿದರು.

ಬಂಧಿತ ಆರೋಪಿಗಳು ಬೆಂಗಳೂರು, ಮುಂಬೈಯಿಂದ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತಿದ್ದರು ಎಂಬ ಮಾಹಿತಿ ಸಿಕ್ಕಿದ್ದು, ಪ್ರಕರಣದಲ್ಲಿ ಇನ್ನು ಕೆಲವು ಆರೋಪಿಗಳಿದ್ದಾರೆ. ಇವರ ಚೈನ್ ಲಿಂಕ್ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

Comments are closed.