ಕರಾವಳಿ

ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ- 14.45 ಲಕ್ಷ ಮೌಲ್ಯದ ಸೊತ್ತು ಸಹಿತ ನಾಲ್ವರ ಬಂಧನ

Pinterest LinkedIn Tumblr

ಕುಂದಾಪುರ: ಭಟ್ಕಳದಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಗಂಗೊಳ್ಳಿ ಪಿಎಸ್ಐ ಭೀಮಾಶಂಕರ್ ಹಾಗೂ ಸಿಬ್ಬಂದಿಗಳ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ವಾಹನ ಸಹಿತ 14.45 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ ಮರವಂತೆಯ ಮಸೀದಿ ಸಮೀಪ ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಕಾರ್ಯಾಚರಣೆ ನಡೆಸಿದ ಗಂಗೊಳ್ಳಿ ಪೊಲೀಸರು ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳಾದ ಮಂಗಳೂರು ಹರೆಕಾಳದ ನಿವಾಸಿಗಳಾದ ಮಹಮ್ಮದ್ ಸಾಕೀರ್(24), ಮಹಮ್ಮದ್ ಜಾಫರ್ (32), ಬೈಂದೂರು ಕಿರಿಮಂಜೇಶ್ವರದ ಅಲ್ಫಾಜ್ (20) ಹಾಗೂ ಹೊನ್ನಾವರ ಮೂಲದ ಮಹಮ್ಮದ್ ಇಸೂಫ್ ಸಾಬ್ (45) ಎಂಬುವರನ್ನು ಬಂಧಿಸಿದ್ದಾರೆ.

ಈ ವೇಳೆ ವಾಹನದಲ್ಲಿ 20.630 ಗ್ರಾಂ ತೂಕದ ಗಾಂಜಾ ಸಿಕ್ಕಿದ್ದು, ಗಾಂಜಾ, 5 ಮೊಬೈಲ್‌ಗಳು, ಇನ್ಸುಲೇಟರ್ ವಾಹನ ಸೇರಿದಂತೆ ಒಟ್ಟು 14.45 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments are closed.