ಕರ್ನಾಟಕ

ಮಾಜಿ ಸಚಿವ ಪ್ರಿಯಾಂಕ್​ ಖರ್ಗೆಗೂ ಕೊರೋನಾ ಸೋಂಕು ದೃಢ

Pinterest LinkedIn Tumblr


ಬೆಂಗಳೂರು: ದೇಶಾದ್ಯಂತ ಜನಸಾಮಾನ್ಯರು ಮಾತ್ರವಲ್ಲದೆ ರಾಜಕಾರಣಿಗಳೂ ಕರೊನಾ ಸೋಂಕಿತರಾಗುತ್ತಿದ್ದಾರೆ. ಇದಕ್ಕೆ ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ಕರೊನಾ ಸೋಂಕಿಗೆ ಒಳಗಾಗಿರುವುದು ಇನ್ನೊಂದು ಸೇರ್ಪಡೆಯಾಗಿದೆ.

ನಾನು ಕರೊನಾ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷೆಯ ವರದಿಯಲ್ಲಿ ಪಾಸಿಟಿವ್ ಬಂದಿರುವುದರಿಂದ ಸೋಂಕು ದೃಢಪಟ್ಟಿದೆ. ಆದರೆ ಸದ್ಯ ನನಗೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ನನ್ನ ನೇರ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಎಚ್ಚರಿಕೆ ವಹಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

Comments are closed.