ಉಡುಪಿ: ಜಿಲ್ಲೆಯಲ್ಲಿ ಕಳೆದೆರಡು ದಿನದಿಂದ ಸುರಿಯುತ್ತಿರುವ ಭಾರಿ ಮಳೆಗೆ ಉಡುಪಿಯಲ್ಲಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ಕೃತಕ ನೆರೆಯಿಂದಾಗಿ ಉಡುಪಿ ಕಲ್ಸಂಕ ಮಣಿಪಾಲ, ಗುಂಡಿಬೈಲು, ಮಲ್ಪೆ ರಸ್ತೆಗಳ ಸಂಚಾರ ಬಂದ್ ಆಗಿದೆ. ಅಂಬಲಪಾಡಿ, ಮಠದ ಬೆಟ್ಟು, ಗುಂಡಿಬೈಲು, ಬನ್ನಂಜೆ,ಕಾಪು ಸೇರಿದಂತೆ ಹಲವು ಭಾಗದಲ್ಲಿ ನೆರೆ ಹಾವಳಿ ತೀವ್ರವಾಗಿದೆ. ಈಗಾಗಾಲೇ 50 ಕುಟುಂಬಗಳನ್ನು ರಕ್ಷಣೆ ಮಾಡಲಾಗಿದ್ದು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಉಡುಪಿ ಪೊಲೀಸರು, ಅಗ್ನಿಶಾಮಕ ದಳ ತಡರಾತ್ರಿಯಿಂದ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಉಡುಪಿಗೆ ಎನ್ ಡಿ ಆರ್ ಎಫ್ ಪಡೆಯನ್ನು ಕರೆಸಿಕೊಳ್ಳಲಾಗುತ್ತಿದೆ. ನೆರೆ ಸಂಕಷ್ಟದಲ್ಲಿ ಸಿಲುಕಿದ್ದರೆ ರಕ್ಷಣೆಗೆ ಸಾರ್ವಜನಿಕರು ತುರ್ತು 1077 ಕಂಟ್ರೋಲ್ ರೂಂ ಗೆ ಸಂಪರ್ಕಿಸಲು ಡಿಸಿ ಕೋರಿದ್ದಾರೆ.
ಭೀಕರ ಮಳೆಯ ಪರಿಣಾಮ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಆವರಣ, ನಗರದ ರಾಷ್ಟ್ರೀಯ ಹೆದ್ದಾರಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು. ಹಲವು ಅಂಗಡಿ ಗೋದಾಮುಗಳಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಭಾರಿಯ ಮಳೆಯ ಪರಿಣಾಮ ಸ್ವರ್ಣ, ಸೀತಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
Comments are closed.