ಕುಂದಾಪುರ: ಬೈಂದೂರು ತಾಲೂಕಿನ ನಾವುಂದದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ನಾವುಂದ ನಿವಾಸಿ ಇಸ್ಮಾಯಿಲ್ (56) ಎಂದು ಗುರುತಿಸಲಾಗಿದೆ.

ನಾವುಂದ ಮಾರುಕಟ್ಟೆ ಕಡೆಯಿಂದ ಇಸ್ಮಾಯಿಲ್ ತನ್ನ ಮನೆಗೆ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಸ್ವಿಫ್ಟ್ ಕಾರೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು ಅಪಘಾತದಿಂದ ರಸ್ತೆಗೆ ಎಸೆಯಲ್ಪಟ್ಟ ಇಸ್ಮಾಯಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಸ್ಮಾಯಿಲ್ ಅವರ ಮೃತದೇಹವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು ಸುದ್ದಿ ತಿಳಿದು ಸ್ಥಳಕ್ಕೆ ಬಂದು ಇಸ್ಮಾಯಿಲ್ ಶವವನ್ನು ನೋಡಿದ ಅವರ ಪುತ್ರನೂ ಪ್ರಜ್ಞೆ ತಪ್ಪಿ ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.