ಕರಾವಳಿ

ಡ್ರಗ್ಸ್‌ ಪ್ರಕರಣ : ಬಂದಿತ ಡ್ಯಾನ್ಸರ್ ಕಿಶೋರ್ ಜೊತೆ ಡ್ರಗ್ಸ್ ಸೇವಿಸುತ್ತಿದ್ದ ಯುವತಿ ಪೊಲೀಸ್ ವಶ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್.22: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಯುವತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಈಕೆ ಡ್ರಗ್ಸ್‌ ಸಾಗಣೆ ಹಾಗೂ ಸೇವನೆ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ ಡ್ಯಾನ್ಸರ್, ಕಿಶೋರ್ ಸಹಚಾರಿ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಣಿಪುರ ಮೂಲದ ಆಸ್ಕಾ ಎಂಬ ಯುವತಿಯನ್ನು ಪೊಲೀಸರು ಬಂಧಿಸಿದ್ದು, ಈಕೆ ಕಿಶೋರ್ ಜೊತೆಗೆ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಹಾಗೂ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ನಗರ ಅಪರಾಧ ಪತ್ತೆ ದಳ ಮತ್ತು ನಾರ್ಕೊಟಿಕ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಖ್ಯಾತ ಡ್ಯಾನ್ಸರ್, ಕೋರಿಯೋಗ್ರಾಫರ್ ಕುಳಾಯಿ ನಿವಾಸಿ ಕಿಶೋರ್ ಅಮನ್ (30) ಹಾಗೂ ಸುರತ್ಕಲ್ ಕಾನ ನಿವಾಸಿ ಅಕೀಲ್ ನೌಶೀಲ್ (28) ನನ್ನು ಶನಿವಾರ (ಸೆಪ್ಟಂಬರ್.19)ಬೆಳಗ್ಗೆ ನಗರದ ಕದ್ರಿ ಪದವು ಪರಿಸರದಲ್ಲಿ ಬಂಧಿಸಿದ್ದರು.

ಬಳಿಕ ವಿಚಾರಣೆ ವೇಳೆ ಕಿಶೋರ್ ತನ್ನ ಜೊತೆ ತನ್ನ ಜೊತೆ ಡ್ರಗ್ಸ್ ಪಾರ್ಟಿ ಮಾಡಿದ್ದ ಯುವತಿಯ ಬಗ್ಗೆ ಮಾಹಿತಿ ನೀಡಿದ್ದು, ಅದರಂತೆ ಪೊಲೀಸರು ಕಿಶೋರ್ ಅಮನ್ ಜೊತೆ ಸಂಪರ್ಕದಲ್ಲಿದ್ದ ಯುವತಿಯನ್ನು ಬಂದಿಸಿದ್ದಾರೆ.

ಕಿಶೋರ್ ಶೆಟ್ಟಿ ಸಂಪರ್ಕದಲ್ಲಿದ್ದು, ಡ್ರಗ್ಸ್ ಸೇವನೆ ಆರೋಪದಲ್ಲಿ ಇಬ್ಬರು ಯುವತಿಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಅವರಿಬ್ಬರ ರಕ್ತದ ಮಾದರಿಯನ್ನು ಡ್ರಗ್ಸ್ ಸೇವನೆ ಪತ್ತೆಗಾಗಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಬಂದಿದ್ದು, ಆಸ್ಕಾ ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.