ಕರ್ನಾಟಕ

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿರುವುದು ದುರದೃಷ್ಟಕರ: ಸಿದ್ದರಾಮಯ್ಯ

Pinterest LinkedIn Tumblr


ಬೆಂಗಳೂರು: ಸಿಬಿಐ ವಿಶೇಷ ನ್ಯಾಯಾಲಯವು ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನೀಡಿರುವ ತೀರ್ಪಿನಲ್ಲಿ 32 ಆರೋಪಿಗಳನ್ನು ಖುಲಾಸೆಗೊಳಿಸಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಂಯ್ಯ ಪ್ರತಿಕ್ರಿಯಿಸಿದ್ದಾರೆ.

ನ್ಯಾಯಾಲಯ 2019ರ ಸುಪ್ರೀಮ್ ಕೋರ್ಟ್ ತೀರ್ಪು ಮತ್ತು ಸಂವಿಧಾನದ ಆಶಯಗಳನ್ನು ಗಮನಕ್ಕೆ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ. ‘ಬಾಬರಿ ಮಸೀದಿ ಧ್ವಂಸ ನೆಲದ ಕಾನೂನಿಗೆ ವಿರುದ್ಧವಾದ ಕೃತ್ಯ’ ಎಂದು 2019 ನವಂಬರ್ 9ರ ಸುಪ್ರೀಮ್ ಕೋರ್ಟ್ ತೀರ್ಪು ಹೇಳಿದೆ. ಈಗ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಾಬರಿ ಮಸೀದಿ ಧ್ವಂಸ ಮಾಡಿದವರು ಯಾರೆಂಬ ಪ್ರಶ್ನೆ ಹಾಗೆಯೇ ಉಳಿದಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಾಬರಿ ಮಸೀದಿ ಧ್ವಂಸ ಮಾಡಿದವರನ್ನು ಶಿಕ್ಷೆಗೊಳಪಡಿಸುವಂತೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Comments are closed.