ಕರ್ನಾಟಕ

ಡ್ರಗ್ ಜಾಲದಲ್ಲಿ ಮಾಜಿ ಡಾನ್ ದಿ. ಮುತ್ತಪ್ಪ ರೈ ಪುತ್ರ?; ಮನೆ ಮೇಲೆ ಸಿಸಿಬಿ ದಾಳಿ

Pinterest LinkedIn Tumblr

ಬೆಂಗಳೂರು: ಇತ್ತೀಚೆಗೆ ನಿಧನರಾದ ಮಾಜಿ ಡಾನ್ ಮುತ್ತಪ್ಪ ರೈ ಅವರ ಮನೆಗೆ ಸಿಸಿಬಿ ಅಧಿಕಾರಿಗಳು ಇಂದು (ಮಂಗಳವಾರ) ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ದಿ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿದ್ದಾರೆ ಎನ್ನಲಾಗಿದ್ದು ಮುತ್ತಪ್ಪ ರೈ ಅವರ ಸದಾಶಿವನಗರ ಮತ್ತು ಬಿಡದಿಯಲ್ಲಿರುವ ಎರಡೂ ಮನೆಗಳಿಗೆ ಏಕಕಾಲದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಡ್ರಗ್ಸ್ ಜಾಲದಲ್ಲಿರುವ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿರುವ ಸಿಸಿಬಿ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಮನೆಗಳಿಗೆ ದಾಳಿ ಮಾಡಿದ್ದಾರೆ.

ಮುತ್ತಪ್ಪ ರೈ ಮಗ ಡಿಕ್ಕಿ ಡ್ರಗ್ ಪೆಡ್ಲರ್ಸ್ ರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮನಗರ ಬಿಡದಿಯ ಮನೆಯಲ್ಲಿ ಸಿಸಿಬಿ ಶೋಧ ಕಾರ್ಯ ನಡೆಸುತ್ತಿದೆ. ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

Comments are closed.