
ಬೆಂಗಳೂರು: ಮಾದಕ ವಸ್ತು ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ (ಮಂಗಳವಾರ) ದಿವಂಗತ ಮುತ್ತಪ್ಪ ರೈ ಮಗ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ದಾಳಿಯ ನಂತರ ಹೆಚ್ಚಿನ ವಿಚಾರಣೆಗೆ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ ಕೇಸ್ನಲ್ಲಿ ಬಂಧಿತರಾಗಿರುವ ಡ್ರಗ್ ಪೆಡ್ಲರ್ಗಳ ಜೊತೆ ಸಂಪರ್ಕ ಹೊಂದಿದ್ದ ಮತ್ತು ಡ್ರಗ್ ಕೇಸ್ನಲ್ಲಿ ತಲೆ ಮರೆಸಿಕೊಂಡಿರುವ ಆದಿತ್ಯ ಆಳ್ವ ಜೊತೆ ನಿಕಟ ಒಡನಾಟ ಹೊಂದಿದ್ದ ಆರೋಪದಲ್ಲಿ ಇಂದು ಮಾಜಿ ಡಾನ್ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
ವಿಚಾರಣೆಗೆ ಸರಿಯಾಗಿ ಸ್ಪಂದಿಸದ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈಯನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆದಿತ್ಯ ಆಳ್ವ ಬಗ್ಗೆ ಪ್ರಶ್ನಿಸಿದರೆ ಗೊತ್ತಿಲ್ಲ ಎಂದು ಹಾರಿಕೆ ಉತ್ತರ ನೀಡಿದ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Comments are closed.