ಕರಾವಳಿ

ಚಾಲೆಂಜಿಂಗ್ ಸ್ಟಾರ್ ಚಿತ್ರದ ಟೀಸರ್ 5 ಮಿಲಿಯನ್ ವೀಕ್ಷಣೆ : ಸಖತ್ ಖುಷಿಯಲ್ಲಿ ದರ್ಶನ್

Pinterest LinkedIn Tumblr

ನಿರ್ದೇಶಕ ತರುಣ್ ಸುಧೀರ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಬಿನೇಷನ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಅಭಿಮಾನಿಗಳು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಚಿತ್ರದ ಬಿಡುಗಡೆಗಾಗಿ ಕಾದು ಕುಳಿತಿದ್ದಾರೆ.

ಇದೇ ವೇಳೆ ತರುಣ್ ಸುಧೀರ್ ನಿರ್ದೇಶನದ ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ‘ರಾಬರ್ಟ್’ ಚಿತ್ರದ ಟೀಸರ್ 5 ಮಿಲಿಯನ್ ವೀಕ್ಷಣೆ ಪಡೆದಿದ್ದು, ಈ ಸಂತಸವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಾಬರ್ಟ್ ಟೀಸರ್ 5 ಮಿಲಿಯನ್ ವೀಕ್ಷಣೆ ಕಂಡ ಸಂತಸ ವ್ಯಕ್ತಪಡಿಸಿರುವ ನಟ ದರ್ಶನ್, ಪ್ರತಿಯೊಬ್ಬ ಅಭಿಮಾನಿಗೂ ತುಂಬು ಹೃದಯ ಧನ್ಯವಾದ ತಿಳಿಸಿದ್ದಾರೆ.

ತಮ್ಮ ಟ್ವಿಟರ್ ಖಾತೆಯಲ್ಲಿ ರಾಬರ್ಟ್ ಚಿತ್ರದ ಟೀಸರ್ 5 million views ಗೆ ಕಾರಣರಾದ ಪ್ರತಿಯೊಬ್ಬರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು ನಿಮ್ಮ ದಾಸ ದರ್ಶನ್ ಎಂದು ಬರೆದುಕೊಂಡಿದ್ದಾರೆ.

ರಾಬರ್ಟ್ ಟೀಸರ್ ಬಿಡುಗಡೆಯಾಗಿ ಏಳು ತಿಂಗಳು ಕಳೆದಿದೆ. ಫೆಬ್ರವರಿ 16 ರಂದು ಈ ಟೀಸರ್ ರಿಲೀಸ್ ಆಗಿತ್ತು. ಈ ಟೀಸರ್ 2 ಲಕ್ಷಕ್ಕಿಂತ ಹೆಚ್ಚು ಲೈಕ್ಸ್ ಸಿಕ್ಕಿದೆ. ತರುಣ್ ಸುಧೀರ್ ನಿರ್ದೇಶನದ ಈ ಚಿತ್ರವನ್ನು ಉಮಾಪತಿ ಶ್ರೀನಿವಾಸ್ ನಿರ್ಮಿಸಿದ್ದಾರೆ. ಆಶಾ ಭಟ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶಿಸಿದ್ದಾರೆ. ಇನ್ನು ಅಕ್ಟೋಬರ್ 9 ರಂದು ನಿರ್ದೇಶಕ ತರುಣ್ ಸುಧೀರ್ ಹುಟ್ಟುಹಬ್ಬದ ಹಿನ್ನೆಲೆ ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Comments are closed.