
ನವದೆಹಲಿ: ಧೋನಿ ಮಗಳ ಮೇಲೆ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದ ಯುವಕನನ್ನು ಗುಜರಾತ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲನ್ನು ಅನುಭವಿಸಿತ್ತು. ಇದರಿಂದ ಕೋಪಗೊಂಡಿದ್ದ ಸಿಎಸ್ಕೆ ತಂಡದ ಅಭಿಮಾನಿ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಯ 6 ವರ್ಷದ ಮಗಳು ಜೀವಾ ಧೋನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಕಳೆದ ವಾರ ಕೆಕೆಆರ್ ವಿರುದ್ಧ ಧೋನಿ ನಾಯಕತ್ವದ ಸಿಎಸ್ಕೆ ತಂಡ 10 ರನ್ಗಳ ಸೋಲು ಕಂಡಿತ್ತು. ಇದಾದ ಬಳಿಕ ಎಂ.ಎಸ್ ಧೋನಿಯ ಪತ್ನಿ ಸಾಕ್ಷಿ ಸಿಂಗ್ ಧೋನಿಯವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಅವರ ಮಗಳನ್ನು ಅತ್ಯಾಚಾರ ಮಾಡಿ, ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿತ್ತು. ಅದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ, ಚೆನ್ನೈ ತಂಡದ ನಾಯಕ ಎಂಎಸ್ ಧೋನಿ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡದ ಕಾರಣದಿಂದ ಅವರ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಗುಜರಾತಿನ ಕಚ್ ಜಿಲ್ಲೆಯಲ್ಲಿ ಪಿಯುಸಿ ಓದುತ್ತಿರುವ 16 ವರ್ಷದ ಯುವಕನನ್ನು ಪೊಲೀಸರು ವಶಕ್ಕೆ ತೆಗದುಕೊಂಡಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಆತ ತಾನೇ ಅತ್ಯಾಚಾರ ಮತ್ತು ಕೊಲೆಯ ಬೆದರಿಕೆ ಹಾಕಿದ್ದೆಂದು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಬೆದರಿಕೆ ಹಾಕಿದ ವ್ಯಕ್ತಿ ಗುಜರಾತ್ನವರನು ಎಂಬ ಮಾಹಿತಿ ಸಿಗುತ್ತಿದ್ದಂತೆ ಈ ಬಗ್ಗೆ ರಾಂಚಿ ಪೊಲೀಸರು ಕಚ್ ಪೊಲೀಸರನ್ನು ಸಂಪರ್ಕಿಸಿ ವಿಚಾರಣೆ ನಡೆಸಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಚ್ ಪೊಲೀಸ್ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಆತನ ವಿರುದ್ಧ ರಾಂಚಿಯಲ್ಲಿ ಎಫ್ಐಆರ್ ದಾಖಲಾಗಿರುವುದರಿಂದ ಆತನನ್ನು ರಾಂಚಿ ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ. ನಾಳೆ ರಾಂಚಿ ಪೊಲೀಸರು ಕಚ್ಗೆ ಆಗಮಿಸಿ, ಆತನನ್ನು ಕರೆದುಕೊಂಡು ಹೋಗುವ ಸಾಧ್ಯತೆಯಿದೆ.
ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್-2020 ಟೂರ್ನಿಯಲ್ಲಿ ಧೋನಿ ನೇತೃತ್ವದ ಚೆನ್ನೈ ತಂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು. ಇದರ ಜೊತೆಗೆ ನಾಯಕನಾಗಿ ಮತ್ತು ಬ್ಯಾಟ್ಸ್ ಮ್ಯಾನ್ ಅಗಿ ಕೂಡ ಎಂಎಸ್ ಧೋನಿಯವರು ನೀರಸ ಪ್ರದರ್ಶನ ತೋರಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
Comments are closed.