ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೈರಂಪಳ್ಳಿ, ಬೆಳ್ಳರ್ಪಾಡಿ ಮೂಡುಮನೆ ನಿವಾಸಿ ಪ್ರದೀಪ ಶೆಟ್ಟಿ (39) ಬಂಧಿತ ಆರೋಪಿ.
2020 ರ ಆಗಸ್ಟ್ 24 ರಂದು ಬೈರಂಪಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದು ಆರೋಪಿಯನ್ನು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿಯ ವಿರುದ್ದ 2018ರಲ್ಲಿ ಕೂಡ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ.
ಜಿಲ್ಲಾ ಎಸ್ಪಿ ಎನ್. ವಿಷ್ಣುವರ್ಧನ್ ಅವರ ಮಾರ್ಗದರ್ಶನದಂತೆ ಮತ್ತು ಹೆಚ್ಚುವರಿ ಎಸ್ಪಿ ಕುಮಾರಚಂದ್ರ ನಿರ್ದೇಶದಂತೆ ಪ್ರಕರಣದ ತನಿಖಾಧಿಕಾರಿಯಾದ ಉಡುಪಿ ಡಿವೈಎಸ್ಪಿ ಟಿ. ಜೈ ಶಂಕರ್ ನೇತೃತ್ವದಲ್ಲಿ 3 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಪತ್ತೆ ಕಾರ್ಯದಲ್ಲಿ ಬ್ರಹ್ಮಾವರ ಸಿಪಿಐ ಅನಂತಪದ್ಮನಾಭ, ಉಡುಪಿ ಡಿಸಿಐಬಿ ಇನ್ಸ್‌ಪೆಕ್ಟರ್ ಮಂಜಪ್ಪ ಡಿ.ಆರ್, ಬ್ರಹ್ಮಾವರ ಪಿಎಸ್ಐ ರಾಘವೆಂದ್ರ, ಹಿರಿಯಡ್ಕ ಪಿಎಸ್ಐ ಸುಧಾಕರ ತೋನ್ಸೆ, ಕಾರ್ಕಳ ನಗರ ಠಾಣೆ ಪಿಎಸ್ಐ ಮಧು ಬಿ., ಹಾಗೂ ಸಿಬಂದಿಗಳಾದ ಎಎಸ್ಐ ಯೋಗಿಶ್, ಜಯಂತ್, ಹೆಡ್ ಕಾನ್ಸ್‌ಟೇಬಲ್ ವೆಂಕಟರಮಣ, ಚಂದ್ರ ಶೆಟ್ಟಿ, ರತ್ನಾಕರ ಶೆಟ್ಟಿ, ಲೋಕೇಶ, ಪ್ರವೀಣ್ ಶೆಟ್ಟಿಗಾರ್, ಡಿಸಿಐಬಿ ತಂಡ ಮತ್ತು ಚಾಲಕರಾದ ಶಾಂತರಾಮ ಅಣ್ಣಪ್ಪ ಮತ್ತು ಶೇಖರ್ ಮೊದಲಾದವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Comments are closed.