ಕರ್ನಾಟಕ

ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಕರ್ನಾಟಕ ಪೊಲೀಸರು..!

Pinterest LinkedIn Tumblr

ಬೆಂಗಳೂರು: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ ರೈತರನ್ನು ಗುರಿಯಾಗಿಸಿ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಕರ್ನಾಟಕದಲ್ಲಿ ಎಫ್ಐಆರ್ ದಾಖಲಾಗಿದೆ.

ನ್ಯಾಯವಾದಿ ರಮೇಶ್ ನಾಯಕ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ರಾಣಾವತ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ(ಜೆಎಂಎಫ್‌ಸಿ) ನ್ಯಾಯಾಲಯ ಕ್ಯಾತಸಂದ್ರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅವರಿಗೆ ನಿರ್ದೇಶನ ನೀಡಿತ್ತು.

ಕಳೆದ ಸೆಪ್ಟೆಂಬರ್ 21ರಂದು ಕಂಗನಾ ರಣಾವತ್ ತನ್ನ ಟ್ವೀಟರ್ ಖಾತೆಯಲ್ಲಿ ಕಂಗನಾಟೀಮ್ ನಿಂದ ರೈತರ ವಿರುದ್ಧ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಪ್ರೊಸೀಜರ್ ಸೆಕ್ಷನ್ 156(3)ರ ಅಡಿಯಲ್ಲಿ ವಕೀಲ ರಮೇಶ್ ನಾಯಕ್ ಅವರು ದೂರು ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆ (ಐಪಿಸಿ) ವಿಭಾಗಗಳ ಅಡಿಯಲ್ಲಿ ದೂರು ದಾಖಲಾಗಿದ್ದು, ಇದರಲ್ಲಿ 108 (ಅಬೆಟ್ಮೆಂಟ್), (153 ಎ) ಮತ್ತು ಶಾಂತಿ ಭಂಗ ಹಾಗೂ (504) ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸಿದ ಬಗ್ಗೆ ಕೇಸು ದಾಖಲಾಗಿದೆ.

ಏನು ಟ್ವೀಟ್…‌
ದೆಹಲಿ ಗಲಭೆಗೆ ಕಾರಣವಾದ ಸಿಎಎ ಬಗ್ಗೆ ತಪ್ಪು ಮಾಹಿತಿ ಮತ್ತು ವದಂತಿಗಳನ್ನು ಹರಡಿದ ಜನರು ಈಗ ರೈತರ ಮಸೂದೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇದರ ಜೊತೆಗೆ ದೇಶದಲ್ಲಿ ಭಯೋತ್ಪಾದನೆಯನ್ನು ಉಂಟು ಮಾಡುತ್ತಿದ್ದಾರೆ. ಅವರು ಭಯೋತ್ಪಾದಕರು ಎಂದು ಸೆ.21ರಂದು ಕಂಗನಾ ಟ್ವೀಟ್ ಮಾಡಿದ್ದರು

Comments are closed.