ಕರ್ನಾಟಕ

ನೆರೆ ಬಾಧಿತ ಕುಟುಂಬಗಳಿಗೆ ಪರಿಹಾರ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪ್ರಯತ್ನ: ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr

ಮೈಸೂರು: ನೆರೆ ಬಾಧಿತ ಕುಟುಂಬಗಳಿಗೆ ಪರಿಹಾರ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ, ಘಟಿಕೋತ್ಸವ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಭಾಷಣ ಮಾಡಿದ ಪ್ರಧಾನಿ ಮೋದಿ, ಕೋವಿಡ್ 19 ಕಾರಣದಿಂದ ಕೆಲವು ನಿರ್ಬಂಧಗಳಿದ್ದರೂ, ಹಬ್ಬ ಆಚರಣೆಗೆ ಯಾವುದೇ ಉತ್ಸಾಹ ಕುಂದಿಲ್ಲ ಎಂದರು.

ಭಾರೀ ಮಳೆ ಹಬ್ಬಗಳ ಆಚರಣೆಗೆ ಸ್ವಲ್ಪ ಮಂಕಾಗಿಸಿದೆ. ಪ್ರವಾಹ ಪೀಡಿತ ಕುಟುಂಬಗಳಿಗೆ ತೀವ್ರ ಸಹಾನೂಭೂತಿಯನ್ನು ವ್ಯಕ್ತಪಡಿಸುವುದಾಗಿ ಮೋದಿ ಹೇಳಿದರು.

Comments are closed.