
ಮಂಗಳೂರು ಅಕ್ಟೋಬರ್ 24 : ಬಂಟ್ವಾಳದ ಮೆಲ್ಕಾರ್‌ನಲ್ಲಿ ಶುಕ್ರವಾರ ನಡೆದ ರೌಡಿ ಶೀಟರ್ ಉಮರ್ ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಆರೋಪಿ ಗುಂಡಿನ ದಾಳಿ ನಡೆಸಿದ ಘಟನೆ ಶನಿವಾರ ಬೆಳ್ಳಂಬೆಳಗ್ಗೆ ಗುಂಡ್ಯದಲ್ಲಿ ಸಂಭವಿಸಿದೆ.
ಉಮರ್ ಫಾರೂಕ್ ಕೊಲೆ ಆರೋಪಿ ಖಲೀಲ್ ಮತ್ತು ಆತನ ಜೊತೆ ಇಬ್ಬರು ಆರೋಪಿಗಳು ಬೆಂಗಳೂರು ಕಡೆಗೆ ಹೋಗುತ್ತಿದ್ದ ಮಾಹಿತಿ ಆಧಾರಿಸಿ ಅವರನ್ನು ಬಂಟ್ವಾಳದಿಂದ ಬೆನ್ನಟ್ಟಿ ಹೋದ ಪೊಲೀಸರು ಆರೋಪಿಗಳನ್ನು ಬಂಧಿಸಲು ಮುಂದಾದಾಗ ಆರೋಪಿ ಖಲೀಲ್ ಪೋಲೀಸರು ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್ ಅವರು ಕೂಡ ಗುಂಡಿನ ದಾಳಿ ನಡೆಸಿದ್ದು,ಕೊಲೆ ಆರೋಪಿ ಕೊಲೆ ಆರೋಪಿ ಖಲೀಲ್‌ಗೆ ಗಾಯವಾಗಿದ್ದು ಗಾಯಗೊಂಡಿದ್ದಾನೆ. ಇದೇ ವೇಳೆ ಗುಂಡಿನ ಚಕಮಕಿಯಲ್ಲಿ ಬಂಟ್ವಾಳ ಗ್ರಾಮಾಂತರ ಎಸ್.ಐ ಪ್ರಸನ್ನ ಅವರೂ ಗಾಯಗೊಂಡಿದ್ದು, ಇಬ್ಬರನ್ನು ಆಸ್ಪತ್ರೆ ಗೆ ದಾಖಲಿಸಲಾಗಿದೆ. ಇವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂಲತಃ ಕಲ್ಲಡ್ಕ ನಿವಾಸಿ ಪ್ರಸಕ್ತ ನಂದಾವರದಲ್ಲಿ ವಾಸವಿರುವ ಖಲೀಲ್ ಬಂಧಿತ ಆರೋಪಿ. ಶುಕ್ರವಾರ ಸಂಜೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ರೌಡಿ ಶೀಟರ್ ಉಮರ್ ಫಾರೂಕ್ ಎಂಬಾತನನ್ನು ಇವರ ತಂಡ ಕಡಿದು ಹತ್ಯೆ ನಡೆಸಿತ್ತು.
ಹತ್ಯೆಯ ಬಳಿಕ ಪರಾರಿಯಾಗಿದ್ದ ಆರೋಪಿಗಳು ಇಂದು ಬೆಳಗ್ಗೆ ಕಾರಿನಲ್ಲಿ ಬೆಂಗಳೂರಿಗೆ ಪರಾರಿಯಾಗು ತ್ತಿರುವ ಮಾಹಿತಿ ಪಡೆದ ಪೊಲೀಸರು ಗುಂಡ್ಯದಲ್ಲಿ ಕಾರನ್ನು ಅಡ್ಡಗಟ್ಟಿದ್ದಾರೆ. ಈ ಸಂದರ್ಭ ಪ್ರಮುಖ ಆರೋಪಿ ಖಲೀಲ್ ನನ್ನು ಪೊಲೀಸರು ಬಂಧಿಸಿದ್ದು ಈತನ ಜೊತೆ ಇದ್ದ ಹಫೀಜ್ ಹಾಗೂ ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕೊಲೆ ಆರೋಪಿಗಳ ಪತ್ತೆಗೆ ಎಸ್.ಪಿ. ಲಕ್ಮೀಪ್ರಸಾದ್ ವಿಶೇಷ ತಂಡ ರಚನೆ ಮಾಡಿದ್ದರು. ಆ ಹಿನ್ನಲೆಯಲ್ಲಿ ನಟೋರಿಯಸ್ ಆರೋಪಿಗಳ ಬಂಧನಕ್ಕೆ ಎಸ್.ಐ.ಅವಿನಾಶ್ ಹಾಗೂ ಪ್ರಸನ್ನ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.
ಮೂಲತಃ ಕಲ್ಲಡ್ಕ ನಿವಾಸಿ ಪ್ರಸಕ್ತ ನಂದಾವರದಲ್ಲಿ ವಾಸವಿರುವ ಖಲೀಲ್ ಖತರ್ನಾಕ್ ಆಗಿದ್ದು ಕೋಮು ಗಲಭೆ ಸಹಿತ ಆನೇಕ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದು ಕಲ್ಲಡ್ಕದಲ್ಲಿ ಉಂಟಾಗುತ್ತಿದ್ದ ಗಲಾಟೆಗೆ ಈತ ಪ್ರಮುಖನಾಗಿದ್ದ. ಈತನ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಇತ್ತೀಚಿಗೆ ಈತನ ಗಡಿಪಾರು ಕೂಡ ಆಗಿತ್ತು. ಕಲ್ಲಡ್ಕ ಇತ್ತೀಚಿಗೆ ನಡೆದ ರತ್ನಾಕರ ಶೆಟ್ಟಿಯವರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಈತನ ಗಡಿಪಾರು ನಡೆದಿತ್ತು.
Comments are closed.