
ಪಾಟ್ನಾ: ಬಿಹಾರದ ಶಿಯೋಹಾರ್ ಜಿಲ್ಲೆಯ ಹಥ್ಸಾರ್ ಗ್ರಾಮದಲ್ಲಿ ಜನತಾದಳ ರಾಷ್ಟ್ರವಾದಿ ಪಕ್ಷದ ಅಭ್ಯರ್ಥಿ ನಾರಾಯಣ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ.
ಸಿಂಗ್ ಅವರ ಬೆಂಬಲಿಗರು ಎಂದು ಹೇಳಕಾಗಿರುವ ಜನರುಹಲ್ಲೆ ನಡೆಸಿದ್ದಾಗಿ ಪೋಲೀಸರು ಹೇಳಿದ್ದಾರೆ. ವಿಧಾನಸಭೆ ಚುನಾವಣೆಗಾಗಿ ಮತಯಾಚನೆ ನಡೆಸುತ್ತಿದ್ದ ವೇಳೆ ನಾರಾಯಣ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ..
“ಇಬ್ಬರು ಜನರನ್ನು ಬಂಧಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ … ಸುಮಾರು ಐದು ರಿಂದ ಆರು ಜನರು ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆ” ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ರಾಕೇಶ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ.
ಘಟನೆ ಸಂಬಂಧ ಪೂರ್ಣಾಹಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಬಿಹಾರ ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದ್ದು, ಮತ ಎಣಿಕೆ ನವೆಂಬರ್ 10 ರಂದು ನಡೆಯಲಿದೆ.
Comments are closed.