
ಮೈಸೂರು: ನಾಡಹಬ್ಬ ಮೈಸೂರು ದಸರೆಯ ಮಹತ್ವದ ಘಟ್ಟ ಜಂಬೂ ಸವಾರಿ ವೇಳೆ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಸಿಎಂ ಬಿ ಎಸ್ ಯಡಿಯೂರಪ್ಪ ಲಲಿತ್ ಮಹಲ್ ಹೆಲಿಪ್ಯಾಡ್ ಗೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೊರೋನಾ ಸಾಂಕ್ರಾಮಿಕ ರೋಗ ಪರಿಣಾಮ ಪ್ರಸಕ್ತ ಸಾಲಿನ ಮೈಸೂರು ದಸರಾ ಹಬ್ಬವನ್ನು ಅದ್ಧೂರಿಯಾಗಿ ಮಾಡಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.
ನಾಡಹಬ್ಬ ಮೈಸೂರು ದಸರೆಯ ಮಹತ್ವದ ಘಟ್ಟ ಜಂಬೂ ಸವಾರಿ ವೇಳೆ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಸಿಎಂ ಬಿ ಎಸ್ ಯಡಿಯೂರಪ್ಪ ಮೈಸೂರಿಗೆ ಬಂದಿಳಿದಿದ್ದು, ಇಲ್ಲಿನ ಲಲಿತ್ ಮಹಲ್ ಹೆಲಿಪ್ಯಾಡ್‌ಗೆ ಮುಖ್ಯಮಂತ್ರಿಗಳು ಆಗಮಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೊರೋನಾ ಸಾಂಕ್ರಾಮಿಕ ರೋಗ ಪರಿಣಾಮ ಈ ಬಾರಿ ಅದ್ಧೂರಿಯಾಗಿ ದಸರಾ ಹಬ್ಬವನ್ನು ಆಚರಿಸಲಾಗುತ್ತಿಲ್ಲ. ಪ್ರಸ್ತುತ ಎದುರಾಗಿರುವ ಎಲ್ಲಾ ಸಂಕಷ್ಟಗಳು ಮುಕ್ತಗೊಂಡು ನೆಮ್ಮದಿಯ ಜೀವನ ನಡೆಸುವಂತಾಗಲಿ ಮುಂದಿನ ವರ್ಷ ಅದ್ಧೂರಿಯಾಗಿ ದಸರಾ ಹಬ್ಬವನ್ನು ಆಚರಿಸೋಣ ಎಂದು ಹೇಳಿದ್ದಾರೆ.
ಕೊರೋನಾ ಹಾಗೂ ಬೇರೆ ಬೇರೆ ಕಾರಣಗಳಿಂದಾಗಿ ಈ ಬಾರಿ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಾಗೂ ಜಂಬೂ ಸವಾರಿಯನ್ನು ಸರಳವಾಗಿ ಮಾಡಲಾಗುತ್ತಿದೆ. ತಾಯಿ ಚಾಮುಂಡೇಶ್ವರಿ ದಯೆಯಿಂದ ಕೊರೋನಾ ವೈರಸ್’ನಿಂದ ಬಿಡುಗಡೆಗೊಂಡ ಬಳಿಕ ಮುಂದಿನ ವರ್ಷ ವಿಜೃಂಭಣೆಯಿಂದ ದಸರಾ ಆಚರಿಸುವ ಶಕ್ತಿ ಚಾಮುಂಡೇಶ್ವರಿ ಕೊಡಲಿ ಎಂದು ತಿಳಿಸಿದ್ದಾರೆ.
Comments are closed.