
ಮಂಗಳೂರು, ಅಕ್ಟೊಬರ್. 28 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಲಕ್ಷಾಂತರ ಮೌಲ್ಯದ ಚಿನ್ನ ಸಹಿತಾ ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಅಬೂಬಕರ್ ಸಿದ್ದೀಕ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಅಬುಬಕ್ಕರ್ ಸಿದ್ದಿಕ್ ದುಬೈನಿಂದ ಅಕ್ರಮವಾಗಿ ಪೌಡರ್ ರೂಪದಲ್ಲಿ ಚಿನ್ನ ಅಡಗಿಸಿಟ್ಟು ತರುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆರೋಪಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭ ವಶಕ್ಕೆ ಪಡೆದಿದ್ದಾರೆ.
ಈತ ದುಬೈನಿಂದ ಸ್ಪೈಸ್ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದಾನೆ. ಆರೋಪಿಯು ಪೌಡರ್ ರೂಪದ ಚಿನ್ನವನ್ನು ದೇಹಕ್ಕೆ ಅಂಟಿಸಿಕೊಂಡು ಅಕ್ರಮ ಸಾಗಾಟ ಮಾಡಿದ್ದು, ತಪಾಸಣೆ ನಡೆಸುವ ವೇಳೆ 24 ಕ್ಯಾರೆಟ್ನ 634 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ 32,96,800 ರೂ. ಎಂದು ಅಂದಾಜಿಸಲಾಗಿದೆ. ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.
Comments are closed.