ಕರಾವಳಿ

ಗೇರುಬೀಜ ಕಳ್ಳತನ ಪ್ರಕರಣದಲ್ಲಿ‌ ಇಬ್ಬರು ಆರೋಪಿಗಳನ್ನು ಬಂಧಿಸಿದ ಬ್ರಹ್ಮಾವರ ಪೊಲೀಸರು

Pinterest LinkedIn Tumblr

ಉಡುಪಿ: ಜಿಲ್ಲೆಯ ಬ್ರಹ್ಮಾವರ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಎರಡು ಗೇರು ಬೀಜ ಕಾರ್ಖನೆಗಳಲ್ಲಿ ಕಳ್ಳತನ ಪ್ರಕರಣ ನಡೆದಿದೆ.

ಸೈಯದ್ ಮೊಹಮ್ಮದ್ ಮತ್ತು ಉಮರ್ ಫಾರೂಕ್ ಬಂಧಿತ ಆರೋಪಿಗಳು.

ಆರೋಪಿಗಳಿಂದ ಮಾರುತಿ ಸ್ವಿಫ್ಟ್ ಕಾರು ಮತ್ತು ಕಾರ್ಖಾನೆಯಿಂದ ಕಳ್ಳತನ ಮಾಡಿದ 1.40ಲಕ್ಷ ಮೌಲ್ಯದ 32 ಗೇರು ಬೀಜ ಡಬ್ಬ ಹಾಗೂ ಮೂರು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಈ ಹಿಂದೆ ಕೆಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Comments are closed.