
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರದೆ ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೂ ಬೆಂಕಿ ಆವರಿಸುತ್ತಿದೆ.
ಬೆಂಗಳೂರಿನ ಹೊಸ ಗುಡ್ಡದಹಳ್ಳಿಯಲ್ಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡದಿಂದ ಫ್ಯಾಕ್ಟರಿ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ಆವರಿಸಿದೆ.
ಮೈಸೂರು ರಸ್ತೆಯಲ್ಲಿರುವ ಹೊಸಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಫ್ಯಾಕ್ಟರಿ ಪಕ್ಕ ನಿಲ್ಲಿಸಿದ್ದ ವಾಹನಗಳು ಸುಟ್ಟು ಭಸ್ಮವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಬ್ಯಾಟರಾಯನಪುರ ಪೊಲೀಸರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಬೆಂಕಿಯ ಕೆನ್ನಾಲಿಗೆಯ ಭಯಾನಕ ಹೊಗೆ ಆಕಾಶದೆತ್ತರಕ್ಕೆ ಚಿಮ್ಮುತ್ತಿದ್ದು, ಅಕ್ಕಪಕ್ಕದ ಮನೆಗಳಿಗೂ ಬೆಂಕಿ ಹೊತ್ತಿಕೊಳ್ಳುತ್ತಿದೆ. ಅಕ್ಕಪಕ್ಕದ ಮನೆವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಇಡೀ ರಸ್ತೆಯಲ್ಲಾ ಎಲ್ಲಿ ನೋಡಿದರೂ ಬೆಂಕಿಮಯವಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿದೆ. ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿರುವುದರಿಂದ ಹರಸಾಹಸ ಪಡುವಂತಾಗಿದೆ. ಈಗಾಗಲೇ ಅಕ್ಕ ಪಕ್ಕದ ಮನೆಯವರನ್ನು ಸ್ಥಳಾಂತರಿಸಲಾಗುತ್ತಿದೆ. ಆದರೆ ಸಾವು, ನೋವಿನ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
Comments are closed.