
ಬೆಂಗಳೂರು, ನವೆಂಬರ್.10 : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ದುಅವರು ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದು ಗೆಲುವು ಸಾಧಿಸಿ, ಹ್ಯಾಟ್ರಿಕ್ ಜಯಗಳಿಸಿದ್ದಾರೆ.
ಈಗಾಗಲೇ 103291 ಮತಗಳನ್ನು ಪಡೆದು 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ದು ಅವರು ಹ್ಯಾಟ್ರಿಕ್ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ರವಿಯವರು 58743 ಮತಗಳನ್ನು ಮಾತ್ರ ಪಡೆಯುವ ಮೂಲಕ ಭಾರೀ ಅಂತರದ ಸೋಲಿಗೆ ಶರಣಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ., ಎಣಿಕೆ ಕೇಂದ್ರದ ಬಳಿ ಭಾರಿ ಸಂಖ್ಯೆಯ ಕಾರ್ಯಕರು ಸೇರಿದ್ದು, ಮುನಿರತ್ನಗೆ ಜಯಘೋಷಗಳನ್ನು ಹಾಕುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ವಶದಲ್ಲಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲೆ ಬಿಜೆಪಿ ತೆಕ್ಕೆಗೆ ಬಿದ್ದಿದೆ.
ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದಾರೆ. ಮುನಿರತ್ನ 1,03,291 ಮತಗಳನ್ನು ಗಳಿಸಿದ್ದರೇ, ಕಾಂಗ್ರೆಸ್ ನ ಹೆಚ್ ಕುಸುಮಾ 58,743 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ನ ಕೃಷ್ಣ ಮೂರ್ತಿ 6,381 ಗಳಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಮುನಿರತ್ನ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 44,548 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.
ಮುನಿರತ್ನಗೆ ಹ್ಯಾಟ್ರಿಕ್ ಗೆಲುವು
ಅಂದಹಾಗೇ ಮುನಿರತ್ನ 2013ರ ಚುನಾವಣೆಯಲ್ಲಿ 71,064 ಮತಗಳನ್ನು ಗಳಿಸಿದ್ದ ಅವರು, 18,813 ಮತಗಳ ಅಂತರದಿಂದ ಗೆದ್ದಿದ್ದರು. 2018ರ ಚುನಾವಣೆಯಲ್ಲಿ ಮುನಿರತ್ನ 1,08,064 ಮತಗಳನ್ನು ಗಳಿಸಿ, 25,492 ಮತಗಳ ಅಂತರದಿಂದ ಗೆದ್ದಿದ್ದರು. ಇದೀಗ 2020ರ ಉಪ ಚುನಾವಣೆಯಲ್ಲಿ 1,03,291 ಮತಗಳನ್ನು ಗಳಿಸಿದ್ದು, 44,548ಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದಾರೆ.
ಆದ್ರೇ ಈ ಬಗ್ಗೆ ಚುನಾವಣಾ ಆಯೋಗದ ಅಧಿಕೃತ ಘೋಷಣೆ ಬಾಕಿ ಇದೆ.
ಹೆಚ್ಚಿನ ವಿವರ ನಿರೀಕ್ಷಿಸಿರಿ…
Comments are closed.