ಕರ್ನಾಟಕ

ಕಣ್ಣೀರು ಹಾಕುವುದು ದೇವೇಗೌಡರ ಕುಟುಂಬದ ಸಂಸ್ಕೃತಿ: ಸಿದ್ದರಾಮಯ್ಯ

Pinterest LinkedIn Tumblr


ಬೆಳಗಾವಿ: ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸಿಮ್ಮ, ಸಮಯಕ್ಕೆ ತಕ್ಕಂತೆ ಅವರು ಸುಳ್ಳು ಹೇಳುತ್ತಾರೆ, ಕಣ್ಣೀರು ಹಾಕುವುದು ದೇವೇಗೌಡ ಮನೆಯವರ ಸಂಸ್ಕೃತಿ. ಒಲೈಕೆಗೂ ಮತ್ತು ಇನ್ಯಾರನ್ನೋ ನಂಬಿಸಲು ಕಣ್ಣೀರು ಹಾಕುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜಕೀಯದಿಂದಲೇ ಕುಮಾರಸ್ವಾಮಿ ಹೊರಟು ಹೋಗಿದ್ದಾರಾ, ಅವರಿಗೆ ಗುಡ್ ವಿಲ್ ಇದ್ದರೆ ಅಲ್ವಾ ಹಾಳಾಗೋದು, ಗುಡ್ ವಿಲ್ ಇಲ್ಲ ಎಂದರೆ ಹಾಳಾಗುವ ಪ್ರಶ್ನೆಯೇ ಇಲ್ಲ ಎಂದು ಕಾಲೆಳೆದರು.

ಸಿದ್ದರಾಮಯ್ಯ ಪ್ರೀಪ್ಲ್ಯಾನ್ ಮಾಡಿ ನನ್ನ ಹೆಸರು ಹಾಳು ಮಾಡಿದ್ದರು ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ನಿಂದ ಕುಮಾರಸ್ವಾಮಿ ಸಿಎಂ ಆಗಿದ್ದರು, ಇವರು ವೆಸ್ಟರ್ನ್ ಹೊಟೆಲ್ ನಿಂದ ಆಡಳಿತ ನಡೆಸಿದ್ದರು. ಇವರ ಕೇಂದ್ರ ಸ್ಥಾನ ಹೊಟೇಲ್ ಆಗಿತ್ತು ಎಂದು ಕಿಡಿಕಾರಿದರು.

ಕಾಂಗ್ರೆಸ್ ಶಾಸಕರಿಗೆ 1900 ಕೋಟಿ ರೂ. ಹಣ ಕೊಟ್ಟ ವಿಚಾರಕ್ಕೆ‌ ಪ್ರತಿಕ್ರಿಯಿಸಿದ ಅವರು, ಇವರ ಮನೆಯಿಂದ ಹಣ ತಂದು ಕೊಟ್ಟಿದ್ದಾರಾ, ನಮ್ಮ ಶಾಸಕರು ಬೆಂಬಲ ಕೊಟ್ಟಿದ್ದಕ್ಕೆ ಅವರು ಸಿಎಂ ಆಗಿದ್ದಾರೆ ತಿರುಗೇಟು ನೀಡಿದರು.

Comments are closed.