ಕರಾವಳಿ

ಮಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ : ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರು

Pinterest LinkedIn Tumblr

ಮಂಗಳೂರು, ಡಿಸೆಂಬರ್.12 : ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಕಾರು ಭಾಗಶ: ಸುಟ್ಟುಹೋದ ಘಟನೆ ನಗರದ ಪಿವಿಎಸ್ ಸರ್ಕಲ್ ನಲ್ಲಿ ನಡೆದಿದೆ.

ಕೊಡಿಯಾಲ್ ಬೈಲ್ ನಿಂದ ಪಿವಿಎಸ್ ಕಡೆ ತೆರಳುತ್ತಿದ್ದ ಟಾಟಾ ಇಂಡಿಕಾ ಕಾರು ಪಿವಿಎಸ್ ಸರ್ಕಲ್ ಬಳಿಯ ಮಾನಸ ಟವರ್‌ ಮುಂಭಾಗ ಬರುತ್ತಿದ್ದಂತೆ ನಡುರಸ್ತೆಯಲ್ಲೇ ಏಕಾಏಕಿ ಬೆಂಕಿ ಹತ್ತಿಕೊಂಡಿದೆ.
ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಸಂಚಾರಿ ಪೊಲೀಸರು ಹಾಗೂ ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬಳಿಕ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟೊರಳಗೆ ಕಾರು ಭಾಗಶಃ ಸುಟ್ಟುಹೋಗಿದೆ.

ಕಾರು ಮುಡಿಪುವಿನಿಂದ ಬಂದಿದ್ದು ನಾಲ್ವರು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಕಾರಿನಲ್ಲಿ ಬೆಂಕಿ ಕಂಡ ಕೂಡಲೇ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದಾನೆ. ಕಾರಿನಲ್ಲಿ ಚಾಲಕ ಸೇರಿ ಮೂವರು ಮಹಿಳೆಯರಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಾರ್ಟ್‌ ಸರ್ಕ್ಯೂಟ್‌‌ನಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments are closed.