ಉಡುಪಿ: ಸಿ.ಎಫ್.ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನು ಈಡಿ ಅಧಿಕಾರಿಗಳು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಉಡುಪಿಯ ಕ್ಲಾಕ್ ಟವರ್ ಎದುರು ಪ್ರತಿಭಟನೆ ಪೂರ್ವಾನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರನ್ನು ಉಡುಪಿ ನಗರ ಠಾಣೆ ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಯಾವುದೇ ಪೂರ್ವಾನುಮತಿ ಪಡೆಯದೇ ಏಕಾ ಏಕಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಕೇಂದ್ರ ಸರಕಾರ ಸೇರಿದಂತೆ ಸಂಘ ಪರಿವಾರದ ವಿರುದ್ದ ಘೋಷಣೆ ಕೂಗಿದ್ದು, ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಠಾಣೆಯ ಪಿಎಸ್ಐ ಸಕ್ತಿವೇಲು ಪ್ರತಿಭಟನೆ ಕೈ ಬಿಡುವಂತೆ ಸೂಚನೆ ನೀಡಿದರು.
ಪೊಲೀಸರ ಸೂಚನೆ ಬಳಿಕವೂ ಸಿಎಫ್ಐ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆ ಮುಂದುವರೆಸಿದ್ದು ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು.
ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಘಟನೆಯ ಎಲ್ಲಾ ಕಾರ್ಯಕರ್ತರನ್ನು ಉಡುಪಿ ನಗರ ಪೊಲೀಸರು ವಶಕ್ಕೆ ಪಡೆದರು.
Comments are closed.