ಕರಾವಳಿ

ತಂಬಾಕು ನಿಯಂತ್ರಣ ಬಗ್ಗೆ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ

Pinterest LinkedIn Tumblr

ಮಂಗಳೂರು, ಡಿಸೆಂಬರ್ 20: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ದ.ಕ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತನಿಖಾದಳ ಕೋಟ್ಪಾ 2003ರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಾಗೂ ಪರಿಣಾಮಕಾರಿ ಅನುಷ್ಠಾನದ ಕುರಿತು ಕಾರ್ಯಕ್ರಮ ಜರಗಿತು.

ಆಹಾರ ಸುರಕ್ಷತಾ ಇಲಾಖೆ ಮತ್ತು ಊರ್ವಸ್ಠೋರ್ ಪೋಲಿಸ್ ಠಾಣೆ ಅಧಿಕಾರಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಸಾರ್ವಜನಿಕ ಸ್ಥಳಗಳಲ್ಲಿ ಇರುವಂತಹ ಅಂಗಡಿ-ಮುಂಗಟ್ಟುಗಳಲ್ಲಿ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಆಹಾರ ಸುರಕ್ಷತಾಧಿಕಾರಿ ರಾಜು, ಪಿಎಸ್‍ಐ,ಶಿ ಧನರಾಜು, ಎಎಸ್‍ಐ, ಬಾಲಕೃಷ್ಣ, ಸಿ.ಪಿ.ಸಿ, ವೀರೇಶ್, -ಜಿಲ್ಲಾ ಸಲಹೆಗಾರ ಡಾ|| ಹನುಮಂತರಾಯಪ್ಪ ಉಪಸ್ಥಿತರಿದ್ಧರು.

Comments are closed.