ಬೆಂಗಳೂರು: ಇಂಗ್ಲೆಂಡ್ನಲ್ಲಿ ಹೊಸ ಮಾದರಿಯ ವೈರಾಣು ಪತ್ತೆಯಾಗಿದ್ದು, ಕೊರೊನಾಗಿಂತಲೂ ಹೊಸ ವೈರಾಣು ಬಹು ಬೇಗನೇ ಹರಡುತ್ತೆ ಹುಷಾರಾಗಿರಿ ಎಂದು ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ಜನರ ರಕ್ಷಣೆಯೇ ಸರ್ಕಾರಕ್ಕೆ ಮುಖ್ಯ ಎಂದಿರುವ ಸಚಿವರು, ಕೊರೊನಾದ ಹೊಸ ಪ್ರಭೇದ ಬರುತ್ತಿರುವ ಹಿನ್ನೆಲೆ ಎಚ್ಚರಿಕೆ ವಹಿಸಿ, ನಾವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳಬೇಕು. ಹಾಗಂತ, ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ. ನಮ್ಮ ರಾಜ್ಯದಲ್ಲಿ ಈ ಸೋಂಕು ಕಾಣಿಸಿಕೊಂಡಿಲ್ಲ. ಆದ್ರು ನಾವು ನಿರ್ಲಕ್ಷ್ಯ ಮಾಡೋದಿಲ್ಲ ಎಂದರು.
ಇನ್ನು ವಿದೇಶದಿಂದ ಬಂದವರು ಖಂಡಿತವಾಗಿಯೂ RTPCR ಟೆಸ್ಟ್ ಮಾಡಿಸಿಕೊಳ್ಳಬೇಕು. ಕ್ವಾರಂಟೈನ್ʼಗೆ ಒಳಗಾಗಬೇಕು.
ಬ್ರಿಟನ್ನಿಂದ ರಾಜ್ಯಕ್ಕೆ 138 ಪ್ರಯಾಣಿಕರು ಕೊರೊನಾ ನೆಗೆಟಿವ್ ರಿಪೋರ್ಟ್ ಇಲ್ಲದೆ ಬಂದಿದ್ದಾರೆ. ಇವರನ್ನ ಟ್ರೇಸ್ ಮಾಡಿ ಟೆಸ್ಟ್ ಮಾಡ್ತೀವಿ. ನಾಳೆಯಿಂದ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ನಡೆಸಲಾಗುತ್ತೆ. ಕೇಂದ್ರ ಸರ್ಕಾರವೂ ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ವಿಶೇಷ ನಿಗಾ ಇಡುವಂತೆ ಸೂಚಿಸಿದೆ ಎಂದು ವಿವರಿಸಿದರು.
Comments are closed.