ಕರಾವಳಿ

ನಿರಂತರ ಕಿರುಕುಳ ಆರೋಪ : ನಗರದ ಉದ್ಯಮಿ ಕಚೇರಿಯಲ್ಲೇ ನೇಣುಬಿಗಿದು ಆತ್ಮಹತ್ಯೆ

Pinterest LinkedIn Tumblr

ಮಂಗಳೂರು, ಜನವರಿ. 21: ನಗರದ ಫ್ಲೆಕ್ಸ್ ಉದ್ಯಮಿಯೋರ್ವರು ಮಂಗಳೂರಿನ ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ಗುರುಪುರ ನಿವಾಸಿ ಉದ್ಯಮಿ ಚಂದ್ರಶೇಖರ್ ಶೆಟ್ಟಿ (38) ಆತ್ಮಹತ್ಯೆ ಮಾಡಿಕೊಂಡವರು. ಹಂಪನಕಟ್ಟೆಯ ಗೋಕುಲ್ ಮಾರ್ಕೇಟ್ ನಲ್ಲಿ “ನಿರಂತರ ಪಬ್ಲಿಸಿಟಿ” ಎಂಬ ಹೆಸರಿನ ಸಂಸ್ಥೆಯಲ್ಲಿ ಫ್ಲೆಕ್ಸ್ ಉದ್ಯಮ ನಡೆಸುತ್ತಿದ್ದ ಇವರು ಪಕ್ಕದಲ್ಲೇ ಇನ್ನೊಂದು ಕಟ್ಟಡದಲ್ಲಿರುವ ತಮ್ಮ ಕಚೇರಿಯೊಳಗೆ ಬುಧವಾರ ಮಧ್ಯಾಹ್ನ 3.45ರ ಸುಮಾರಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭ ಸ್ಥಳೀಯ ಅಂಗಡಿಯವರು ಅವರ ಕಚೇರಿಗೆ ಆಗಮಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆಗೈದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಚಂದ್ರಶೇಖರ್ ಅವರಿಗೆ ಓರ್ವ ವ್ಯಕ್ತಿ ನಿರಂತರ ಕಿರುಕುಳ ನೀಡುತ್ತಿದ್ದ ಎಂದು ಅವರ ಸಹೋದರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದು, ಈ ಕುರಿತು ಮಂಗಳೂರು ಉತ್ತರ (ಬಂದರ್) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.