ಕರಾವಳಿ

ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗ್ರತಿ ಶಿಬಿರ, ರಕ್ತ ದಾನ ಶಿಬಿರ : ಸ್ಥಳೀಯರಲ್ಲಿ ಸಂಭ್ರಮ

Pinterest LinkedIn Tumblr

ಮಂಗಳೂರು, ಜನವರಿ.31: ದ.ಕ‌ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಆಯೋಜಿಸಲಾಗಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗ್ರತಿ ಶಿಬಿರವು ಸ್ಥಳೀಯರ ಸಂಭ್ರಮಕ್ಕೆ ಸಾಕ್ಷಿಯಾಯಿತು.

ಕಳೆದ ಕೆಲ ದಿನಗಳಿಂದ ಸಿದ್ಧತೆಗಾಗಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಕೊಂಡಿದ್ದ ಸಿರಿಬಾಗಿಲು ಮತ್ತು ಕೊಂಬಾರು ಗ್ರಾಮಸ್ಥರು ಇಂದು ಜಾತ್ರೆ ಸಮಾರಂಭದಂತೆ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡರು.

ಕೊಂಬಾರಿನ ದ.ಕ.ಜಿ.ಪಂ. ಉನ್ನತ ಹಿ.ಪ್ರಾ. ಶಾಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಆರೋಗ್ಯ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗಿದೆ.

ಶಾಲೆಯ ಆವರಣದಲ್ಲಿ ಪಲ್ಸ್ ಪೋಲಿಯೊ ಕೇಂದ್ರವನ್ನು ಕೂಡ ತೆರೆಯಲಾಗಿದೆ. ಎಜೆ ಆಸ್ಪತ್ರೆ ಸಹಯೋಗ ದಲ್ಲಿ ವೈದ್ಯಕೀಯ ಶಿಬಿರದಲ್ಲಿ ಗ್ರಾಮಸ್ಥರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ರೆಡ್ ಕ್ರಾಸ್ ನಿಂದ ಆಯೋಜಿಸಲಾದ ರಕ್ತ ದಾನ ಶಿಬಿರದಲ್ಲಿ ಭಾಗವಹಿಸಿ ರಕ್ತ ದಾನದ ಮೂಲಕವೂ ಗ್ರಾಮಸ್ಥರು  ಗಮನ ಸೆಳೆದರು.ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಬಿಳಿ ವಸ್ತ್ರದ ಮೇಲೆ ಸಹಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಜಿ.ಪಂ. ಉಪ ಕಾರ್ಯದರ್ಶಿ ಆನಂದ್, ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ತಹಶಿಲ್ದಾರ್ ಅನಂತ ಶಂಕರ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶಾಲಾ ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಿಲಾಗಿದೆ. ಗ್ರಾಮ ವಾಸ್ತವ್ಯ ದ ಹಿನ್ನೆಲೆಯಲ್ಲಿ ಕೊಂಬಾರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸುಂಕದಕಟ್ಟೆಯಿಂದ ರಸ್ತೆಗೆ ತೇಪೆ ಕಾರ್ಯ ನಿನ್ನೆ ನಡೆಸಲಾಗಿದೆ. ವೇದಿಕೆಯಲ್ಲಿ ವಾರಂಭದಲ್ಲಿ ಯೋಗಗುರು ಡಾ. ಜಗದೀಶ್ ಶೆಟ್ಟಿಯವರು ಯೋಗ ತರಬೇತಿ ನೀಡಿದರು.

Comments are closed.