ದೆಹಲಿ: ಜನವರಿ 26ರಂದು ಕೆಂಪುಕೋಟೆಯ ಬಳಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ನಟ ದೀಪ್ ಸಿಧುವನ್ನು ಮಂಗಳವಾರ ಬಂಧಿಸಿದ್ದಾರೆ.

ಗಣರಾಜ್ಯೋತ್ಸವ ದಿನದಂದು ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ದೀಪ್ ಸಿಧು ಬಂಧನವಾಗಿದೆ. ಘಟನೆ ಬಳಿಕ ಪೊಲೀಸರು ನಟನನ್ನು ಪತ್ತೆಗೆ ಬಲೆಬೀಸಿದ್ದರಾದರೂ ಆತ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ಬಂಧಸಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಟ್ರ್ಯಾಕ್ಟರ್ ರ್ಯಾಲಿಯ ವೇಳೆ ಕೆಂಪುಕೋಟೆಗೆ ನುಗ್ಗಿದ್ದ ಪ್ರತಿಭಟನಾಕಾರರು ಕೆಂಪುಕೋಟೆಯ ಮುಂಭಾಗದ ಧ್ವಜಸ್ಥಂಬ ಹತ್ತಿ ಸಿಖ್ ಧ್ವಜಗಳನ್ನು ಹಾರಿಸಿದ್ದರು.
ಈ ಘಟನೆಗಳಿಗೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ದಿಲ್ಲಿ ಪೊಲೀಸರು 12 ಮಂದಿ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಬಿಡುಗಡೆಗೊಳಿಸಿದ್ದರು. ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.
Comments are closed.