
ಶ್ರೀನಗರ: ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಪೊಲೀಸರೊಬ್ಬರು ಹುತಾತ್ಮರಾಗಿದ್ದು ಮತ್ತೊಬ್ಬ ಪೊಲೀಸ್ ಗೆ ಗಾಯವಾಗಿದೆ.
ಉಗ್ರರು ಅವಿತು ಕುಳಿತಿದ್ದಾರೆ ಎಂಬ ನಿಖರ ಮಾಹಿತಿ ಪಡೆದ ಪೊಲೀಸರು ಜಿಲ್ಲೆಯ ಬೀರ್ವ ಪ್ರದೇಶದ ಝನಿಗಮ್ ಗ್ರಾಮವನ್ನು ಸುತ್ತುವರಿದು ಶೋಧ ಕಾರ್ಯ ಆರಂಭಿಸಿದರು. ಪೊಲೀಸರು ಹುಡುಕಾಟ ನಡೆಸುತ್ತಿರುವಾಗ ಉಗ್ರರು ಗುಂಡಿನ ಮಳೆಗೈಯಲಾರಂಭಿಸಿದರು.
ಈ ಸಂದರ್ಭದಲ್ಲಿ ಎನ್ ಕೌಂಟರ್ ಏರ್ಪಟ್ಟು ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರಿಗೆ ತೀವ್ರ ಗಾಯಗಳಾದವು. ತಕ್ಷಣವೇ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಯಿತಾದರೂ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮಗೊಂಡಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೊಂದು ಎನ್ ಕೌಂಟರ್ ನಡೆದಿದ್ದು, ಅದರಲ್ಲಿ ಮೂವರು ಉಗ್ರರು ಹತ್ಯೆಗೊಂಡಿದ್ದಾರೆ. ಉಗ್ರರ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Comments are closed.