
ಮಂಗಳೂರು, ಫೆಬ್ರವರಿ 25 :- ಕರ್ನಾಟಕ ಸರ್ಕಾರದ ಮಾನ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಸಿ.ಪಿ. ಯೋಗೇಶ್ವರ ಅವರು ಫೆಬ್ರವರಿ 26 ರಿಂದ 28 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆಬ್ರವರಿ 26 ರಂದು ಬೆಳಿಗ್ಗೆ 9.05ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 10.45 ಕ್ಕೆ ಬೈರಡಿ ಕೆರೆ ಭೇಟಿ ನೀಡಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11.45ಕ್ಕೆ ಎನ್.ಎಮ್.ಟಿ.ಪಿ. ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4.30ಕ್ಕೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಫೆಬ್ರವರಿ 27 ರಂದು ಬೆಳಿಗ್ಗೆ 9.45 ಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10.30 ಕ್ಕೆ ಸಂಗನಿಕೇತನ ಕಚೇರಿಗೆ ಭೇಟಿ ನೀಡಲಿದ್ದಾರೆ. ನಂತರ ಮಂಗಳೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಫೆಬ್ರವರಿ 28 ರಂದು ಬೆಳಿಗ್ಗೆ 9.45 ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
Comments are closed.