
ಮಂಗಳೂರು: ಪತ್ರಕರ್ತರ ವೈದ್ಯಕೀಯ ಚಿಕಿತ್ಸೆಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದೆ.
ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಸಂಘದ ನಿಯೋಗವು ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಪ್ರೇಮಾನಂದ ಶೆಟ್ಟಿ ಅವರನ್ನು ಬುಧವಾರ ಭೇಟಿಯಾಗಿ ಮನವಿ ಅರ್ಪಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸೇರಿದಂತೆ ರಾಜ್ಯದ ಹಲವು ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಅನಾರೋಗ್ಯಕ್ಕೊಳಗಾದ ಪತ್ರಕರ್ತರ ವೈದ್ಯಕೀಯ ಚಿಕಿತ್ಸೆಗೆ ನೆರವು ನೀಡಲು ಅನುದಾನ ಮೀಸಲಿರಿಸಿದೆ.
ಅನಾರೋಗ್ಯ ,ಅಪಘಾತದಿಂದ ಸಮಸ್ಯೆ ಎದುರಿಸಿದ ಪತ್ರಕರ್ತರಿಗೆ ವೈದ್ಯಕೀಯ ಚಿಕಿತ್ಸೆಯ ವೆಚ್ಚ ಭರಿಸಲು,ಆರ್ಥಿಕ ನೆರವು ನೀಡಲು ಮಂಗಳೂರು ಮಹಾನಗರ ಪಾಲಿಕೆಯ ಬಜೆಟ್ ನಲ್ಲೂ ಅನುದಾನ ಮೀಸಲಿರಿಸಬೇಕೆಂದು ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಆಗ್ರಹಿಸಿದೆ.

ಕೆಯುಡಬ್ಲ್ಯುಜೆ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ ರೈ ಕಟ್ಟ, ಸತ್ಯಾ .ಕೆ, ಹಿಲರಿ ಕ್ರಾಸ್ತಾ, ಆರ್.ಸಿ.ಭಟ್, ಹರೀಶ್ ಮೋಟುಕಾನ ,ಸುರೇಶ್ ಡಿ.ಪಳ್ಳಿ ಉಪಸ್ಥಿತರಿದ್ದರು
Comments are closed.