ಕರಾವಳಿ

ಕಲಿಕೆಯಲ್ಲಿ ಹಿಂದುಳಿದಿದ್ದಕ್ಕೆ ಮನನೊಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Pinterest LinkedIn Tumblr

ಕುಂದಾಪುರ: ಕಲಿಕೆಯಲ್ಲಿ ಹಿಂದುಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ನಡೆದಿದೆ.

(ಸಾಂದರ್ಭಿಕ ಚಿತ್ರ)

ಶ್ವೇತಾ (17) ಮೃತ ದುರ್ದೈವಿ. ಉಪ್ಪುಂದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ತಾಯಿ ಹಾಲು ತರಲು ತೆರಳಿದ್ದ ವೇಳೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯ ಈ ಕೃತ್ಯವನ್ನೆಸಗಿದ್ದಾಳೆ.

ಕಲಿಕೆಯಲ್ಲಿ ಹಿಂದುಳಿದ ವಿಚಾರದಲ್ಲಿಯೇ ಶ್ವೇತಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗುತ್ತಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಬೈಂದೂರು ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.