
ಮಂಗಳೂರು, ಮಾರ್ಚ್ 29 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ರವರು ಮಾರ್ಚ್ 30 ಹಾಗೂ 31 ರಂದು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದಾರೆ.
ಮಾರ್ಚ್ 30ರಂದು ಬೆಳಿಗ್ಗೆ 11.10ಕ್ಕೆ ಮಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾತ್ರಿ 7.40 ಕ್ಕೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಮಾರ್ಚ್ 31 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕ ಆಸ್ಪತ್ರೆ/ ಸಮುದಾಯ ಆಸ್ಪತ್ರೆ/ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ಹಾಗೂ ಸೌಲಭ್ಯಗಳ ಕುರಿತು ಪರಿಶೀಲನೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಂಜೆ 4.40 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
Comments are closed.