ರಾಷ್ಟ್ರೀಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊರೊನಾ

Pinterest LinkedIn Tumblr

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಈ ಸಂಬಂಧ ಸ್ವತಃ ರಾಹುಲ್ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ಅಲ್ಲದೆ ಸಂಪರ್ಕದಲ್ಲಿದ್ದವರು ಈ ಕೂಡಲೇ ಟೆಸ್ಟ್ ಮಾಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಟ್ವೀಟ್ ನಲ್ಲೇನಿದೆ..?
ಅಲ್ಪ ಪ್ರಮಾಣದ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿವೆ. ಹೀಗಾಗಿ ಕೋವಿಡ್ 19 ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಹಿನ್ನೆಲ್ಲೆಯಲ್ಲಿ ನನ್ನ ಸಂಪರ್ಕದಲ್ಲಿದ್ದವರು ಆದಷ್ಟು ಬೇಗ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ನಿನ್ನೆಯಷ್ಟೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವುದು ದೃಢವಾಗಿತ್ತು. ಕೊರೊನಾ ಪರೀಕ್ಷೆ ಮಾಡಿದಾಗ ಪಾಸಿಟಿವ್ ವರದಿ ಬಂದ ಬೆನ್ನಲ್ಲೇ ಮಾಜಿ ಪ್ರಧಾನಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

Comments are closed.