ಬೆಂಗಳೂರು: ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ನಿತ್ಯ ಬಿಗುಡಾಯಿಸುತ್ತಿದ್ದು ಈ ಬಗ್ಗೆ ಚರ್ಚೆ ನಡೆಸಲು ರಾಜ್ಯಪಾಲ ವಜುಭಾಯಿ ವಾಲಾ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಸಂಜೆಯಿಂದ 6.45 ತನಕವೂ ನಡೆಯುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಯಿಂದಲೇ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಬೆಂಗಳೂರು ಮತ್ತು ರಾಜ್ಯದ ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆಯನ್ನು ನಡೆಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಸೇರಿದಂತೆ ಅನೇಕ ನಾಯಕರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಕೋವಿಡ್ ಪರಿಸ್ಥಿತಿಯ ಸಂದರ್ಭದಲ್ಲಿ ಜನರನ್ನು ಕಾಪಾಡಬೇಕು. ಬೆಂಗಳೂರು ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ಸೋಂಕು ಹೆಚ್ಚಿರುವ ಕಡೆ ಇಂದಿನಿಂದಲೇ ಲಾಕ್ ಡೌನ್ ಮಾಡಿ ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
ಸರ್ಕಾರ ತಜ್ಞರು ನೀಡಿದ ವರದಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಬ್ಬೊಬ್ಬ ಸಚಿವರದ್ದು ಒಂದೊಂದು ದಾರಿಯಾಗಿದೆ ಎಂದು ಸಿದ್ದರಾಮಯ್ಯ ದೂರಿದರು.
Comments are closed.