ರಾಷ್ಟ್ರೀಯ

ಧೋನಿ ಅವರ ತಂದೆ-ತಾಯಿಗೆ ಕೊರೊನಾ ವೈರಸ್ ಸೋಂಕು; ಆಸ್ಪತ್ರೆಗೆ ದಾಖಲು

Pinterest LinkedIn Tumblr

ರಾಂಚಿ: ಭಾರತದ ಮಾಜಿ ನಾಯಕ, ಹಾಗೂ ಹಾಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ನಾಯಕ ಎಂಎಸ್ ಧೋನಿ ಅವರ ತಂದೆ-ತಾಯಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಧೋನಿ ತಂದೆ ಪಾನ್‌ ಸಿಂಗ್‌ ಮತ್ತು ತಾಯಿ ದೇವಕಿ ದೇವಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಮುಂಜಾಗ್ರತಾ ಕ್ರಮವಾಗಿ ಜಾರ್ಖಂಡ್ ನ ರಾಂಚಿಯಲ್ಲಿರುವ ಪಲ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಎಂಎಸ್ ಧೋನಿ ಸದ್ಯ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಿಎಸ್‌ಕೆ ತಂಡವನ್ನು ಮುನ್ನಡೆಸುತ್ತಿದ್ದು, ಚೆನ್ನೈ ಉತ್ತಮ ಪ್ರದರ್ಶನ ನೀಡುತ್ತಿದೆ. ಈವರೆಗೆ ಸಿಎಸ್‌ಕೆ ಒಟ್ಟು 3 ಪಂದ್ಯಗಳನ್ನಾಡಿದ್ದು, ಇದರಲ್ಲಿ ಎರಡರಲ್ಲಿ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಸದ್ಯ 3ನೇ ಸ್ಥಾನದಲ್ಲಿದೆ. 4ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಮಧ್ಯೆ ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ಏಪ್ರಿಲ್ 21ರಂದು ಅಂದರೆ ಇಂದು ನಡೆಯಲಿದೆ.

Comments are closed.