ಕರಾವಳಿ

ಪ್ರಧಾನ ಮಂತ್ರಿ ಮತ್ಸ್ಯಸಂಪದಾ ಯೋಜನೆ : ಮೀನುಗಾರರಿಗೆ ಸಹಾಯಧನಕ್ಕೆ ಅರ್ಜಿಆಹ್ವಾನ

Pinterest LinkedIn Tumblr

ಮಂಗಳೂರು, ಎಪ್ರಿಲ್ 22 : ಮೀನುಗಾರಿಕೆ ಇಲಾಖೆಯಿಂದ ಪ್ರಸ್ತುತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದಾ ಯೋಜನೆಯಡಿ ವಿವಿಧ ಕಾರ್ಯಕ್ರಮಗಳಿಗೆ ಮೀನುಗಾರರು, ಮೀನು ಕೃಷಿಕರಿಂದ ಹಾಗೂ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ ಮೀನುಗಾರರಿಗೆ ಸಹಾಯಧನ ನೀಡುವ ಯೋಜನೆಗಳಿಗೆ ಅರ್ಜಿಅಹ್ವಾನಿಸಲಾಗಿದೆ.

ಅರ್ಜಿಗಳನ್ನು ಮಂಗಳೂರು ಮೀನುಗಾರಿಕಾ ಬಂದರಿನಲ್ಲಿರುವ ತಾಲೂಕು ಮಟ್ಟದ ಮೀನುಗಾರಿಕಾ ಇಲಾಖಾ ಕಚೇರಿಯಲ್ಲಿ ಸಲ್ಲಿಸಲು ಮೇ. 15 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕಾ ಇಲಾಖಾ ಅಂತರ್ಜಾಲ https://fisheries.karnataka.gov.in ಅಥವಾ ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂ: 0824-2451292 ನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Comments are closed.