ಆರೋಗ್ಯ

ಕೋವಿಡ್ ನಿಯಮ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ ಬಗ್ಗೆ ನೆಟ್ಟಿಗರು‌ ಫುಲ್ ಗರಂ..!

Pinterest LinkedIn Tumblr

ಉಡುಪಿ: ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಆದೇಶ ನೀಡುತ್ತಿದ್ದ ಉಡುಪಿ ಜಿಲ್ಲಾಧಿಕಾರಿಗಳು ಮಾಸ್ಕ್ ಹಾಕದೆ ಸಮಾರಂಭವೊಂದರಲ್ಲಿ ಭಾಗವಹಿಸಿ ಕೊವೀಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಆರಂಭವಾಗಿದೆ.

ಉಡುಪಿ‌ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಶುಕ್ರವಾರ ರಾತ್ರಿ ಉಡುಪಿಯ ಹೆಚ್ಚುವರಿ ಎಸ್ಪಿ ಅವರ ಮಗಳ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಮಾತ್ರವಲ್ಲದೆ ಮಾಸ್ಕ್ ಇಲ್ಲದೇ ಫೋಟೋ ಫೋಸ್‌ ಕೊಟ್ಟಿದ್ದಾರೆ. ಅವರು ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಟೋ ವಿಡಿಯೋ ಇದೀಗ ವೈರಲ್ ಆಗಿದೆ.

ಇತ್ತೀಚೆಗಷ್ಟೇ ಬಸ್ಸಿನಲ್ಲಿ ಹೆಚ್ಚುವರಿಯಾಗಿ ನಿಂತಿದ್ದ ವಿದ್ಯಾರ್ಥಿಗಳನ್ನು ಕೆಳಗಿಳಿಸಿ ಆಕ್ರೋಶಕ್ಕೆ ಗುರಿಯಾಗಿದ್ದ ಜಿಲ್ಲಾಧಿಕಾರಿ ವಿರುದ್ದ ನೆಟ್ಟಿಗರು ಕಿಡಿಕಾರಿದ್ದಾರೆ.

Comments are closed.