
ಮಂಗಳೂರು, ಎಪ್ರಿಲ್ .28: ಕೋವಿಡ್ ಕರ್ಫ್ಯೂ ವಿಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇಂದಿನಿಂದ (ಎ.28, ಬುಧವಾರ) ದ.ಕ.ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ.
ಕೋರೋನ 2ನೆ ಅಲೆಯನ್ನು ನಿಗ್ರಹಿಸುವ ಸಲುವಾಗಿ ರಾಜ್ಯದಲ್ಲಿ ಇಂದಿನಿಂದ ಮತ್ತೆ ಲಾಕ್ ಡೌನ್ ಜಾರಿಗೆ ಬಂದಿದೆ. ಮಂಗಳವಾರ ರಾತ್ರಿ 9ರಿಂದ ಮೇ 12ರ ತನಕ ಲಾಕ್ ಡೌನ್ ಆದೇಶ ಜಾರಿಯಲ್ಲಿರಲಿದೆ. ಈ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ.
ಸರಕಾರದ ಮುಂದಿನ ಆದೇಶ ಬಂದ ಮೇಲೆ ಬಸ್ ಸಂಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ದಿಲ್‌ರಾಜ್ ಆಳ್ವ ಮಾಧ್ಯಮಕ್ಕೆ ತಿಳಿಸಿದ್ದಾರೆ.
Comments are closed.