ಕರಾವಳಿ

ಕೋವಿಡ್ : ಪತ್ರಕರ್ತರು ಎಚ್ಚರಿಕೆ ವಹಿಸಿಕೊಂಡು ಕೆಲಸ ಮಾಡಲು ಸೂಚನೆ

Pinterest LinkedIn Tumblr

 

ಮಂಗಳೂರು, ಎಪ್ರಿಲ್.29: ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ವಿಚಾರದಲ್ಲಿ ಪತ್ರಕರ್ತರು ತಮ್ಮ ಆರೋಗ್ಯದ ರಕ್ಷಣೆ ವಿಚಾರದಲ್ಲಿ ಕಾಳಜಿ ವಹಿಸಬೇಕಾಗಿದೆ.

ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕಡೆಗೆ ಗಮನ ಹರಿಸಬೇಕಾಗಿದೆ.
ಪತ್ರಕರ್ತರಿಗೆ ಆರೋಗ್ಯದ ವಿಚಾರದಲ್ಲಿ ಏನಾದರೂ ಸಮಸ್ಯೆ ಉಂಟಾದರೆ ಸಂಘದ ಅಧ್ಯಕ್ಷರನ್ನು ಅಥವಾ ಪ್ರಧಾನ ಕಾರ್ಯದರ್ಶಿಯವರನ್ನು ಸಂಪರ್ಕಿಸಿ ನೆರವು ಪಡೆಯಬಹುದು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹಾಗು ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.