ಬೆಂಗಳೂರು: ಮೇ 24ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ ಇರಲಿದೆ ಎಂದು ಇದೇ ವೇಳೆ ಮಾಹಿತಿ ನೀಡಿದ್ದಾರೆ.

(ಸಾಂದರ್ಭಿಕ ಚಿತ್ರ)
ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.
ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಹೆಚ್ಚುತ್ತಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 17,470 ಖಾಸಗಿ ಅಭ್ಯ ಸೇರಿ 68,6708 ಅಭ್ಯಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು.
Comments are closed.