
ಮಂಗಳೂರು : ವೆನ್ಲಾಕ್‌ಗೆ ಕೋವಿಡ್ ಪರೀಕ್ಷೆ ನಡೆಸಲು ಬರುವ ಸಾರ್ವಜನಿಕರಿಗೆ ಇನ್ನು ಮುಂದೆ 24 ಗಂಟೆಯೊಳಗೆ ಪರೀಕ್ಷಾ ವರದಿ ಲಭ್ಯವಾಗಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ವೆನ್ಲಾಕ್‌ಗೆ ಕೋವಿಡ್ ಪರೀಕ್ಷೆ ನಡೆಸಲು ಬರುವ ಮಂದಿ ಅಪ್ಲಿಕೇಶನ್‌ನಲ್ಲಿ ಸರಿಯಾದ ವಿವರ ದಾಖಲಿಸದೇ ಇರುತ್ತಿದ್ದುದರಿಂದ ಅಪಲೋಡ್ ಮಾಡಲು ತೊಡಕಾಗುತ್ತಿತ್ತು. ವಾರದೊಳಗೆ ಈ ಸಮಸ್ಯೆ ಬಗೆಹರಿಯಲಿದ್ದು, ಬಳಿಕ 24 ಗಂಟೆಯೊಳಗೆ ಪರೀಕ್ಷಾ ವರದಿ ಲಭ್ಯವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ.
ಮುಂದಿನ 30-40 ದಿನದೊಳಗೆ ವೆನ್ಲಾಕ್‌ನಲ್ಲಿ ಆಕ್ಸಿಜನ್ ಪ್ಲಾಂಟ್ ಅಳವಡಿಸಲಾಗುವುದು. 10 ದಿನದೊಳಗೆ 50 ವೆಂಟಿಲೇಟರ್‌ಗಳು ಬರಲಿದೆ. ಅಲ್ಲದೆ 250 ಆಕ್ಸಿಜನೇಟೆಡ್ ಬೆಡ್ ಅಳವಡಿಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ವೆನ್ಲಾಕ್‌ನಲ್ಲಿ ಇದ್ದ 6 ಟನ್ ಸಾಮರ್ಥ್ಯದ ಆಕ್ಸಿಜನ್ ಸಿಲಿಂಡರ್ ಈಗ 12 ಟನ್‌ಗೆ ಏರಿಕೆಯಾಗಿದೆ. ಇವೆಲ್ಲವೂ ಬಡವರಿಗಾಗಿ ಮೀಸರಿಸಲಾಗಿದೆ. ವೆನ್ಲಾಕ್‌ನಲ್ಲಿ ಇದುವರೆಗೆ ಕೇವಲ 12 ಇಂಟೆನ್‌ಸಿವ್ ಕೇರ್ ಇತ್ತು. ಆದರೆ ಕೊರೋನಾ ಜಿಲ್ಲೆಯನ್ನು ಕಾಡಿದ ಬಳಿಕ ಒಂದೇ ವರ್ಷದಲ್ಲಿ ಸಂಸದ ನಳಿನ್ ಕುಮಾರ್ ಮತ್ತು ಬಿಜೆಪಿ ಸರಕಾರದ ಮುತುವರ್ಜಿಯಿಂದಾಗಿ 70 ವೆಂಟಿಲೇಟರ್‌ಗಳು ಸದ್ಯ ವೆನ್ಲಾಕ್‌ನಲ್ಲಿವೆ.
ಅಲ್ಲದೆ 20 ವೆಂಟಿಲೇಟರ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗಾಗಿ ಮೀಸಲಿರಿಸಲಾಗಿದೆ. ಒಟ್ಟು90 ವೆಂಟಿಲೇಟರ್‌ಗಳು ಬಡವರಿಗೆ ಸುಲಭವಾಗಿ ದೊರೆಯುತ್ತಿವೆ. ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲೂ ಆಕ್ಸಿಜನ್ ಪ್ಲಾಂಟ್ ಮಾಡುವ ಬಗ್ಗೆಯೂ ಕೆಲಸ ಕಾರ್ಯಗಳಾಗುತ್ತಿವೆ ಎಂದು ಶಾಸಕ ಕಾಮಾತ್ ಮಾಹಿತಿ ನೀಡಿದರು.
Comments are closed.