ಕರ್ನಾಟಕ

ತುಮಕೂರು ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಕೊರೋನಾದಿಂದ ನಿಧನ

Pinterest LinkedIn Tumblr

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತುಮಕೂರು ಹಿರಿಯ ಸಹಾಯಕ ನಿರ್ದೇಶಕರಾಗಿದ್ದ ಡಿ.ಮಂಜುನಾಥ್ ರವರು ಕೋವಿಡ್ ಸೋಂಕಿನಿಂದಾಗಿ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಂಜುನಾಥ್ ಅವರು ಮೂಲತಃ ದೊಡ್ಡಬಳ್ಳಾಪುರದ ನೆಲಕುಂಟೆಯವರಾಗಿದ್ದು ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದರು.

ಸಂಜೆವಾಣಿ, ಕರುನಾಡ ಸಂಜೆ, ಇಂದು ಸಂಜೆ, ವಾರ್ತಾಭಾರತಿ ಸೇರಿ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಮಂಜುನಾಥ್ ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.

ಮಂಜುನಾಥ್ ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂತಾಪ ಸೂಚಿಸಿದೆ. “ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತುಮಕೂರು ಹಿರಿಯ ಸಹಾಯಕ ನಿರ್ದೇಶಕರಾಗಿದ್ದ ಶ್ರೀ ಡಿ.ಮಂಜುನಾಥ್ ರವರು ಕೋವಿಡ್ ಸೋಂಕಿನಿಂದಾಗಿ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಈ ಕುರಿತು ಇಲಾಖೆಯು ತೀವ್ರ ಸಂತಾಪ ವ್ಯಕ್ತಪಡಿಸಿದೆ.” ಎಂದು ಟ್ವೀಟ್ ಮಾಡಲಾಗಿದೆ.

ಅಗಲಿದ ಮಂಜುನಾಥ್ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮದಲ್ಲಿ ಕೋವಿಡ್ ನಿಯಮಾನುಸಾರ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿದೆ.

Comments are closed.