ಕರಾವಳಿ

ಮದುವೆ ಸಮಾರಂಭ ಹಾಗೂ ಇತರೆ ಕಾರ್ಯಕ್ರಮಗಳನ್ನು ಸಂಪೂರ್ಣ ನಿಷೇಧಿಸಲು ಸಂಸದ ಕಟೀಲ್ ಸೂಚನೆ

Pinterest LinkedIn Tumblr

ಮಂಗಳೂರು, ಮೇ 13 : ಗ್ರಾಮ ಪಂಚಾಯತ್‍ನಲ್ಲಿ ದಿನಕ್ಕೊಮ್ಮೆ ಕಾರ್ಯಪಡೆ ಸಭೆಗಳನ್ನು ನಡೆಸಿ ಸ್ಥಳೀಯವಾಗಿ ಬರುವ ಕೋವಿಡ್ ಕೇಸ್‍ಗಳ ಸಮಗ್ರ ವರದಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಪಡೆದು ಅವರುಗಳ ಯೋಗಕ್ಷೇಮ ವಿಚಾರಿಸಬೇಕು ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದರು.

ಅವರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪುತ್ತೂರು, ಕಡಬ, ಮಂಗಳೂರು, ಮೂಡಬಿದ್ರೆ ಮತ್ತು ಬಂಟ್ವಾಳದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು ಸೇರಿದ ಗ್ರಾಮ ಮಟ್ಟದ ಟಾಸ್ಕ್‍ಪೋರ್ಸ್ ಸಮಿತಿ ಸದಸ್ಯರೊಂದಿಗೆ ಕೋವಿಡ್-19 ನಿಯಂತ್ರಣಕುರಿತ ಸಂವಾದ ಸಭೆಯಲ್ಲಿ ಮಾತನಾಡಿದರು.

ಕಾರ್ಯಪಡೆಯ ಸದಸ್ಯರುಗಳು ಪ್ರತಿ ಮನೆಗಳಿಗೆ ಭೇಟಿ ನೀಡಿಕೋವಿಡ್ ಸಾಮಾನ್ಯರೋಗ ಲಕ್ಷಣಗಳನ್ನು ಹೊಂದಿದವರನ್ನು ವಿಶ್ವಾಸಕ್ಕೆತೆಗೆದುಕೊಂಡು ಕೋವಿಡ್ ಪರೀಕ್ಷೆ ಮಾಡಿಸುವಂತೆ ತಿಳಿಸಬೇಕು, ಸೋಂಕಿತರಆರೋಗ್ಯದ ವರದಿಯನ್ನು ಪಟ್ಟಿ ಮಾಡಿಕೊಳ್ಳಬೇಕು ಎಂದರು.

ಮದುವೆ ಸಮಾರಂಭ ಹಾಗೂ ಇತರೆ ಸಾಮಾಜಿಕ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದರು.

ವೀಡಿಯೋ ಸಂವಾದದಲ್ಲಿಎಲ್ಲಾಗ್ರಾಮ ಪಂಚಾಯತ್ ಗಳಲ್ಲಿ ಸಕ್ರೀಯವಾಗಿಇರುವಕೋವಿಡ್ ಪ್ರಕರಣಗಳ ಸಂಖ್ಯೆಗಳ ಮಾಹಿತಿಯನ್ನು ಪಡೆದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ನಿಯಂತ್ರಣಕುರಿತಂತೆ ಹೆಚ್ಚಿನಜಾಗೃತಿ ಮೂಡಿಸುವಂತೆ ತಿಳಿಸಿದರು.

ವಿಡಿಯೋ ಸಂವಾದದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಾಜೇಶ್ ನಾಯ್ಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್, ಪುತ್ತೂರು, ಕಡಬ, ಮಂಗಳೂರು, ಮೂಡಬಿದ್ರೆ ಮತ್ತು ಬಂಟ್ವಾಳದ ಗ್ರಾಮ ಪಂಚಾಯತ್‍ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು ಸೇರಿದಗ್ರಾಮ ಮಟ್ಟದ ಟಾಸ್ಕ್‍ಪೋರ್ಸ್ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.

Comments are closed.