ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದ ಫ್ಲೈ ಓವರ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪ ಇನೋವಾ ಕಾರಿನ ಟಯರ್ ಸ್ಫೋಟಗೊಂಡು ಕಾರು ಪಲ್ಟಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ಮೃತಪಟ್ಟ ಮಹಿಳೆಯು ವಸಂತಿ (35) ಎಂದು ಗುರುತಿಸಲಾಗಿದೆ. ಇವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಕೂಡ ಅವರು ಮೃತಪಟ್ಟಿದ್ದಾರೆ.
ಕಾರಿನಲ್ಲಿ ಇರುವವರು ಬೈಂದೂರಿನ ಬಂಟವಾಡಿಯವರೆಂದು ತಿಳಿದು ಬಂದಿದೆ. ಇನೋವಾ ಕಾರಿನಲ್ಲಿ ಇವರು 5 ಜನರಿದ್ದು ಸಾಸ್ತಾನದಿಂದ ಹಟ್ಟಿಕುದ್ರುಗೆ ಹೋಗುತ್ತಿರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನು ಉಳಿದ ನಾಲ್ವರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Comments are closed.