
ಮಂಗಳೂರು, ಮೇ.18 : ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ಎಂಆರ್ಪಿಎಲ್ ಕಂಪನಿಯಿಂದ ತಲಾ 10 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವರಾದ ಆರ್. ಅಶೋಕ್ ತಿಳಿಸಿದರು.
ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ. ಜಿಲ್ಲೆಯಲ್ಲಿ ವ್ಯಾಪಕ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಆರ್. ಅಶೋಕ್ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಯ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಿಸಲಾದ ಕೋರಮಂಡಲ್ ಸರೆಂಡರ್ 9ನ ಸಿಬ್ಬಂದಿಯನ್ನು ಅವರು ಎನ್ಎಂಪಿಟಿ ಕಚೇರಿಯಲ್ಲಿ ಭೇಟಿಯಾದರು. ಜತೆಗೆ ಅವರು ರಕ್ಷಣೆಯಾದ ಕಾರ್ಮಿಕರಿಂದ ಮಾಹಿತಿ ಸಂಗ್ರಹಿಸಿದರು.

ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ತೌಕ್ತೆ ಚಂಡಮಾರುತದಿಂದ ಸಂಭವಿಸಿದ ಹಾನಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಚಂಡಮಾರುತದಿಂದ ಮನೆ ಸಂಪೂರ್ಣ ಕುಸಿದು ಬಿದ್ದಿದ್ದರೆ 5 ಲಕ್ಷ ಪರಿಹಾರ, ಭಾಗಶಃ ಹಾನಿಯಾಗಿದ್ದರೆ 1 ಲಕ್ಷ ಪರಿಹಾರ ಘೋಷಿಸಿದೆ.
ಅರಬ್ಬಿ ಸಮುದ್ರದ ಟಗ್ ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಒದಗಿಸುವುದಾಗಿ ತಿಳಿಸಿದರು.

ತೌಕ್ತೆ ಚಂಡಮಾರುತದಿಂದಾಗಿ ರಾಜ್ಯದ 22 ತಾಲ್ಲೂಕುಗಳ 121 ಗ್ರಾಮಗಳಲ್ಲಿ ಹಾನಿಯಾಗಿದೆ. ಒಟ್ಟು 333 ಮನೆಗಳಿಗೆ ಹಾಗೂ 644 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. 6 ಜನರು ಮೃತಪಟ್ಟಿದ್ದಾರೆ. 290 ಜನರಿಗೆ ಕಾಳಜಿ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಚಂಡಮಾರುತದಿಂದಾಗಿ ಜಿಲ್ಲಾಧಿಕಾರಿಗಳು ಈಗಾಗಗಲೇ ಕಂಟ್ರೋಲ್ ರೂಮ್ ತೆರೆದಿದ್ದು, ಅದರಲ್ಲಿ ಎಸಿ ಮತ್ತು ತಹಶಿಲ್ದಾರ್ಗಳು ಕೆಲಸ ಮಾಡುತ್ತಿದ್ದು, ಇಲ್ಲಿ 20ಜನ ಎನ್ಡಿಆರ್ಎಫ್, ಎಸ್ಡಿಆರ್ಎಫ್ 50 ಜನ, ಹೋಮ್ ಗಾರ್ಡ್ 100, ಹಾಗೂ 6ಕಾಲಜಿ ಕೇಂದ್ರಗಳನ್ನು ತೆರೆಯಲಾಗಿದ್ದು ಇಲ್ಲಿ 168 ಜನ ಇದ್ದು, 182 ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.
Comments are closed.